Sunday, November 22, 2026

ಪ್ರಾಯೋಗಿಕ ಆವೃತ್ತಿ

ಶಾಸಕ ಉದಯ್ ಗರುಡಾಚಾರ್ ಗೆ ಎರಡು ತಿಂಗಳ ಜೈಲು ಶಿಕ್ಷೆ

ರಾಜಧಾನಿಯಾ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಎಂ.ಎಲ್.ಎ ಉದಯ್ ಗರುಡಾಚಾರ್ ಗೆ ಎರಡು ತಿಂಗಳ ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ.

ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿ ಚುನಾವಣೆಗೆ ಸ್ಪರ್ಧಿಸಿದ್ದ ಕಾರಣಕ್ಕಾಗಿ ಈಗ ಉದಯ್ ಗರುಡಾಚಾರ್ ಗೆ ಎರಡು ತಿಂಗಳ ಸಜೆಯನ್ನು ಕೋರ್ಟ್ ನೀಡಿದೆ.

ಚುನಾವಣಾ ಆಯೋಗಕ್ಕೆ ಪ್ರಮಾಣ ಪತ್ರದ ಅಫಿಡವಿಟ್ ನಲ್ಲಿ ಕ್ರಿಮಿನಲ್ ಕೇಸುಗಳ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದರು.

ಈ ಕಾರಣಕ್ಕಾಗಿ ಶಿಕ್ಷೆಯನ್ನು ಪ್ರಕಟಿಸಿದ ಬಳಿಕ ಜಾಮಿನಿಗಾಗಿ ಶಾಸಕ ಉದಯ್ ಗರುಡಾಚಾರ್ ಕೋರ್ಟಿಗೆ ಮನವಿ ಮಾಡಿದ್ದರು. ಇದನ್ನು ಪರಿಶೀಲಿಸಿದ ನ್ಯಾಯಾಧೀಶರು ಮೂರು ವರ್ಷಕ್ಕಿಂತ ಕಡಿಮೆಗೆ ಒಳಪಟ್ಟ ಶಿಕ್ಷೆಯಾಗಿರುವ ಹಿನ್ನೆಲೆಯಲ್ಲಿ 25,000 ಬಾಂಡ್ ಶೂರಿಟಿ ಒದಗಿಸಲು ನ್ಯಾಯಾಧೀಶ ಜೆ ಪ್ರೀತ್ ‍ಷರತ್ತು ಸೂಚನೆ ನೀಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ