Thursday, September 19, 2024

ಪ್ರಾಯೋಗಿಕ ಆವೃತ್ತಿ

ನೀರು ಉಳಿಸಿ ಎಂಬುದು ಪರಿಸರದ ಎಚ್ಚರಿಕೆ ಗಂಟೆ

ನೀರು ಕೃಷಿ, ಕೈಗಾರಿಕೆ, ಪ್ರತಿನಿತ್ಯದ ಕೆಲಸಕ್ಕೆ ಬೇಕು, ಅನಾವೃಷ್ಠಿಯನ್ನು ಅನುಭವಿಸಿದ ಸಂದರ್ಭದಲ್ಲಿ ಪ್ರತಿ ಹನಿ ನೀರಿನ ಬೆಲೆ ತಿಳಿದಿದೆ, ಹಾಗಾಗಿ ನೀರನ್ನು ಉಳಿಸಿ ಎಂಬುದು ಪರಿಸರ ನಮಗೆ ನೀಡಿರುವ ಎಚ್ಚರಿಕೆ ಗಂಟೆಯಾಗಿದೆ ಎಂದು ರಾಜ್ಯಸಭಾ ಸದಸ್ಯ ಡಾ.ಡಿ.ವಿರೇಂದ್ರ ಹೆಗ್ಗಡೆ ತಿಳಿಸಿದರು.

ಇಂದು ಜಿಲ್ಲಾಡಳಿತದ ವತಿಯಿಂದ ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದ್ದ ಮಹಾ ಕುಂಭಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ದಬಹಳಷ್ಟು ವಸ್ತುಗಳು‌ ನಮ್ಮ ಜೀವನದಲ್ಲಿ ಸಹಕರಿಯಾಗಿರುತ್ತದೆ. ಆಯುಧ ಪೂಜೆಯಲ್ಲಿ ಆಯುಧಗಳು ಹಾಗೂ ಮನೆಯಲ್ಲಿ ಉಪಯೋಗಿಸುವ ವಸ್ತುಗಳಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.

ನೀರು ನಮ್ಮ ಜೀವನಾಡಿ, ನೀರನ್ನು ಪೂಜಿಸಿ, ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ,  ಕೆ.ಆರ್.ಪೇಟೆಯಲ್ಲಿ ಕಾವೇರಿ, ಲಕ್ಷ್ಮಣ ತೀರ್ಥ ಹಾಗೂ ಹೇಮಾವತಿ ನದಿಗಳು ಸೇರಿ ತ್ರಿವೇಣಿ ಸಂಗಮವಾಗಿದೆ. ಇಲ್ಲಿ‌ ನೀರನ್ನು ಪೂಜಿಸಿ, ಅರಾಧಿಸಲು ಕುಂಭ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಇಲ್ಲಿ ಪುಣ್ಯ ಸ್ನಾನ ಮಾಡಿ ಎಂದರು.

ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ಮಾತನಾಡಿ ಕಾವೇರಿ,ಹೇಮಾವತಿ, ಲಕ್ಷ್ಮಣತೀರ್ಥ ಮೂರು ನದಿಗಳು ಸಮಾಗಮವಾಗುವ ಈ ತ್ರಿವೇಣಿ ಸಂಗಮದಲ್ಲಿ ಜಗದ್ಗುರುಗಳ ದಿವ್ಯ ಸಾನಿಧ್ಯ ದಲ್ಲಿ ಮಹಾ ಕುಂಭಮೇಳ ಆಚರಣೆಯನ್ನು ಮಾಡುತ್ತಿದ್ದೇವೆ ಎಂದರು.

ಧಾರ್ಮಿಕ ಕಾರಿಡಾರ್‌ಗಳ ಅಭಿವೃದ್ದಿಯತ್ತ ಚಿಂತನೆ

ದೇಶದಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಪುನರುಜ್ಜೀವನಗೊಳಿಸುತ್ತಿರುವಂತೆ ಕರ್ನಾಟಕ ರಾಜ್ಯದಲ್ಲೂ ಧಾರ್ಮಿಕ ಕಾರಿಡಾರ್‌ ಗಳ ಅಭಿವೃದ್ದಿಗೆ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಒಲವು ತೋರಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಅವಕಾಶಗಳ ಬಗ್ಗೆ ವರದಿ ನೀಡುವಂತೆ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿಔಏ ಶಶಿಕಲಾ ಜೊಲ್ಲೆ  ತಿಳಿಸಿದರು.

ಪೂಜ್ಯರ ನೇತೃತ್ವದಲ್ಲಿ ನಡೆಯುತ್ತಿರುವ ಇಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಮೂಲ ಧಾರ್ಮಿಕ ಸಂಸ್ಕೃತಿಯನ್ನ ಜನ ಮಾನಸದಲ್ಲಿ ಬಿತ್ತಿ ಬೆಳೆಸುವ ಕಾರ್ಯ ನಡೆಸಲಾಗುತ್ತಿದೆ. ಸಂಸ್ಕೃತಿಯನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ನಮ್ಮ ಸರಕಾರವೂ ಚಿಂತನೆ ನಡೆಸಿದ್ದು, ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಹೇಳಿದರು..

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿದಾನಂದ ಜೀ ಮಹಾರಾಜ್, ಕಾಗಿನೆಲೆ ಕನಕಗುರು ಪೀಠ ಶ್ರೀ ಶ್ರೀ ಶಿವಾನಂದಪುರಿ ಸ್ವಾಮೀಜಿ, ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ರೇಷ್ಮೆ ಸಚಿವ ನಾರಾಯಣ ಗೌಡ ಹಾಜರಿದ್ದರು.

ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಸಿಇಒ ಶಾಂತ ಎಲ್. ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು, ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ತಹಶೀಲ್ದಾರ್ ರೂಪ, ಕುಂಭ ಮೇಳ ಸಂಯೋಜಕ ಸಣ್ಣ ಸ್ವಾಮಿಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!