Friday, September 20, 2024

ಪ್ರಾಯೋಗಿಕ ಆವೃತ್ತಿ

ಕಾಮೇಗೌಡರ ನಿಧನಕ್ಕೆ ಸಚಿವರ ಸಂತಾಪ

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಅಂತರ್ಜಲ ವೃದ್ಧಿಯಲ್ಲಿ ದೇಶದ ಗಮನವನ್ನು ಸೆಳೆದ 16 ಚೆಕ್ ಡ್ಯಾಂಗಳ ನಿರ್ಮಾತೃ, ರಾಜ್ಯೋತ್ಸವ, ಬಸವಶ್ರೀ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದ ಆಧುನಿಕ ಭಗೀರಥ ರೆಂದೆ ಖ್ಯಾತಿ ಪಡೆದಿದ್ದ‌ ಕಲ್ಮನೆ ಕಾಮೇಗೌಡ (84) ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ.

ಅಂತರ್ಜಲ, ಪರಿಸರ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಅವರ ನಿಧನದಿಂದ ಸಾಮಾಜಿಕ ಸೇವಾ ಕ್ಷೇತ್ರ ಬಡವಾಗಿದೆ ಎಂದು ಸಚಿವರು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.

ಶೋಕ ಸಂದೇಶ

ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿದ್ದ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವು ಉಂಟಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ  ಡಾ.ನಾರಾಯಣಗೌಡ ತಿಳಿಸಿದ್ದಾರೆ.

15ಕ್ಕೂ ಹೆಚ್ಚು ಕೆರೆ ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿದ್ದ ಕಾಮೇಗೌಡರ ಕಾರ್ಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಮನ್ ಕಿ ಬಾತ್ ನಲ್ಲಿ ಶ್ಲಾಘಿಸಿದ್ದರು. ಅವರು ಮಾಡಿರುವ ಕೆಲಸಕ್ಕೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸಿತ್ತು. ಅವರ ಮಾದರಿ ಕೆಲಸ ಇಂದಿನ ಸಮಾಜಕ್ಕೆ ಸ್ಪೂರ್ತಿ, ಮಾದರಿ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವರು ತಿಳಿಸಿದ್ಧಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!