ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿ.ಬೆಂಗಳೂರು ಇದರಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ 487 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ:ಸಿಒ 77 ಸಿಸಿಬಿ 2022, ಬೆಂಗಳೂರು, ದಿನಾಂಕ: 29-07-2022ರನ್ವಯ ಅನುಮೋದಿಸಿದಂತೆ, ನೇರ ನೇಮಕಾತಿಗೆ ಪ್ರಕಟಣೆ ಹೊರಡಿಸಿರುವ ಹುದ್ದೆಗಳ ಸಂಖ್ಯೆ, ಮೀಸಲಾತಿ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳಿಗೆ ಅರ್ಜಿ ಸಲ್ಲಿಸುವ ಸಂಬಂಧ ನೇಮಕಾತಿ ಪ್ರಕ್ರಿಯೆಯ ಪೂರ್ಣ ವಿವರಗಳನ್ನು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ಜಾಲ ತಾಣದಿಂದ(WEBSITE)www.kmfnandini.coopನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ಇಲ್ಲಿ ಸಂಪೂರ್ಣವಾಗಿ ಮಾಹಿತಿ ಪಡೆಯಬಹುದು.




