Monday, November 23, 2026

ಪ್ರಾಯೋಗಿಕ ಆವೃತ್ತಿ

ಮಹನೀಯರ ಆದರ್ಶ ಪಾಲಿಸಿ- ಡಾ. ಹೆಬ್ರಿ

ವೀರ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ ಸೇರಿದಂತೆ ಸ್ವತಂತ್ರ ಹೋರಾಟಕ್ಕೆ ಶ್ರಮಿಸಿದಂತೆ ಹಲವು ಮಹನೀಯರ ಪುಸ್ತಕಗಳನ್ನು ಓದುವಂತಹ ಹವ್ಯಾಸ ಬೆಳೆಸಿಕೊಂಡು, ಅವರ ಆದರ್ಶಗಳನ್ನು ಪಾಲಿಸಬೇಕೆಂದು ಹಿರಿಯ ಸಾಹಿತಿ ಡಾ. ಪ್ರದೀಪ್ ಕುಮಾರ್ ಹೆಬ್ರಿ ಹೇಳಿದರು.

ಮಂಡ್ಯ ನಗರದ ಗಾಂಧಿನಗರದಲ್ಲಿ ಇರುವ ಕನ್ನಿಕ ಶಿಲ್ಪ ನವೋದಯ ತರಬೇತಿ ಕೇಂದ್ರದಲ್ಲಿ ಸ್ವತಂತ್ರ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ಸ್ವತಂತ್ರ ಸಂಗ್ರಾಮದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ಧಮನಕಾರಿ ಕಾನೂನುಗಳ ವಿರುದ್ಧ ಸಿಡಿದ್ದೆದ್ದು, ಹೋರಾಟ ನಡೆಸಿದರು, ಮುಖ್ಯ ಮುಖ್ಯವಾಗಿ ಬ್ರಿಟಿಷರ ದತ್ತು ಮಕ್ಕಳಿಗೆ ಹಕ್ಕಿಲ್ಲ ಹಾಗೂ ಸಹಾಯಕ  ಸೇನಾ ಪದ್ದತಿಗಳು ಚನ್ನಮ್ಮ ಅವರನ್ನು ಕೆರಳುವಂತೆ ಮಾಡಿದವು, ಕರ್ನಾಟಕದಲ್ಲಿ ಬ್ರಿಟಿಷರ ವಿರುದ್ದ ಹೋರಾಡಿದ ಮಹಿಳೆಯರನ್ನು ಕಿತ್ತೂರು ರಾಣಿ ಚನ್ನಮ್ಮ ಮೊದಲಿಗರಾಗಿ ನಿಲ್ಲುತ್ತಾರೆ ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಸ್ವತಂತ್ರ ಸೇನಾನಿಗಳ ಕುರಿತು ಸಾಹಸಗಾಥೆಗಳನ್ನು ಹೇಳುವ ಮೂಲಕ ಮಕ್ಕಳಿಗೆ ಸ್ವಂತ್ರಂತ್ರ ಸಂಗ್ರಾಮದಲ್ಲಿ ವೀರ ಮಹಿಳೆಯರ ಸಾಹಸವನ್ನು ಬಣ್ಣಿಸಿದರು. ಈ ಸಂದರ್ಭದಲ್ಲಿ ಶಿಕ್ಷಕಿ ಕನ್ನಿಕ ಸೇರಿದಂತೆ ಹಲವು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ