ಹಿಮಾಚಲ ಪ್ರದೇಶದ ಸಿಮ್ಲಾದಲ್ಲಿ ನವೆಂಬರ್ 2 ರಿಂದ ನವೆಂಬರ್ 6 ರವರೆಗೆ ನಡೆಯುವ 19 ವರ್ಷದೊಳಗಿನ ಖೇಲೋ ಇಂಡಿಯಾ ಮಹಿಳಾ ವಾಲಿಬಾಲ್ ಲೀಗ್ ಪಂದ್ಯಾವಳಿಗೆ ಕರ್ನಾಟಕ ರಾಜ್ಯದಿಂದ ಮಹಿಳಾ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆಯು ಅ.27ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕಲ್ಯಾಣ ಶಾಖೆಯ ಮೂಲಕ ಕಂಠೀರವ ಕ್ರೀಡಾಂಗಣದ ವಾಲಿಬಾಲ್ ಆಂಕಣದಲ್ಲಿ ನಡೆಯಲಿರುವ ಆಯ್ಕೆ ಪ್ರಕ್ರಿಯೆಯಲ್ಲಿ ವಿವಿಧ ಜಿಲ್ಲೆಯ ಮಹಿಳಾ ವಾಲಿಬಾಲ್ ಕ್ರೀಡಾಪಟುಗಳು ಭಾಗವಹಿಸಬಹುದಾಗಿದ್ದು, ಭಾಗವಹಿಸಲು ಇಚ್ಚಿಸುವ ಕ್ರೀಡಾಪಟುಗಳು ನವೆಂಬರ್ 1, 2004 ಅಥವಾ ನಂತರ ಜನಿಸಿರಬೇಕು.
ಕ್ರೀಡಾಪಟುಗಳಿಗೆ ಊಟೋಪಹಾರ ಹಾಗೂ ಪ್ರಯಾಣ ಭತ್ಯೆ,ದಿನಭತ್ಯೆಯನ್ನು ಇಲಾಖೆಯಿಂದ ಭರಿಸಲಾಗುವುದಿಲ್ಲ. ಈ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಕ್ರೀಡಾಪಟುಗಳು ತರಬೇತಿ ಶಿಬಿರ ಹಾಗೂ ಪಂದ್ಯಾವಳಿಗೆ ತೆರಳಲು ಪೂರ್ವ ಸಿದ್ಧತೆಯೊಂದಿಗೆ ಹಾಗೂ ಆಧಾರ್ ಕಾರ್ಡ್ ಮತ್ತು ಎಸ್.ಎಸ್.ಎಲ್.ಸಿ, ಅಂಕಪಟ್ಟಿಯೊಂದಿಗೆ ಬರಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಟಣೆ ತಿಳಿಸಿದೆ.




