Friday, November 20, 2026

ಪ್ರಾಯೋಗಿಕ ಆವೃತ್ತಿ

ದ್ವೇಷ ಭಾಷಣ : ದೂರು ದಾಖಲಾಗದಿದ್ದರೂ ಕ್ರಮ

ದ್ವೇಷ ಭಾಷಣ ಮಾಡುವವರ ವಿರುದ್ಧ ದೂರು ದಾಖಲಾಗದಿದ್ದರೂ ಪೊಲೀಸರು ಅಂತಹ ವ್ಯಕ್ತಿಗಳ ವಿರುದ್ಧ ಕ್ರಮ ಕೈಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಇಂತಹ ದ್ವೇಷ ಭಾಷಣ ಕರಣಗಳಲ್ಲಿ ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ವರದಿಯನ್ನು ಸಲ್ಲಿಸುವಂತೆ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಪೊಲೀಸರಿಗೆ ಕೋರ್ಟ್ ಸೂಚಿಸಿದೆ ಮತ್ತು ಯಾವುದೇ ದೂರು ದಾಖಲಾಗದಿದ್ದರೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದೆ. ಯಾವುದೇ ಭಾಷಣ ಅಥವಾ ಕ್ರಿಯೆಯು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A, 153B ಮತ್ತು 295A ಮತ್ತು 505ರಡಿ ಅಪರಾಧವಾಗುತ್ತದೆ, ಆದ್ದರಿಂದ ಈ ಸೆಕ್ಷನ್ ಗಳಡಿ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಿತು.

ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರ ಪೀಠವು “ಮುಸ್ಲಿಂ ಸಮುದಾಯದ ವಿರುದ್ಧ ವಿವಿಧ ವ್ಯಕ್ತಿಗಳು ಮಾಡುತ್ತಿರುವ ದ್ವೇಷದ ಭಾಷಣಗಳಿಗೆ” ಸಂಬಂಧಿಸಿದ ಪ್ರಕರಣದಲ್ಲಿ ಕಠಿಣವಾದ ಅವಲೋಕನ ಮಾಡಿ, ಕಠಿಣ ಕ್ರಮ ಸೂಚನೆ ನೀಡಿತು.

ಕೇರಳದ ಕೋಝಿಕ್ಕೋಡ್ ನಿವಾಸಿ ಶಾಹೀನ್ ಅಬ್ದುಲ್ಲಾ ಎಂಬುವವರು ದ್ವೇಷ ಭಾಷಣಗಳ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಈ ವಿಚಾರಣೆ ನಡೆಯಿತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ