Thursday, September 19, 2024

ಪ್ರಾಯೋಗಿಕ ಆವೃತ್ತಿ

ಹೊಸಹೊಳಲಿನಲ್ಲಿ ಮೊಳಗಿದ ಕನ್ನಡಗೀತೆಗಳು

ಹೊಯ್ಸಳ ಶಿಲ್ಪಕಲಾ ವೈಭವದ ಕೆ.ಆರ್.ಪೇಟೆ ತಾಲ್ಲೂಕಿನ ಹೊಸಹೊಳಲು ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯದ ಆವರಣದಲ್ಲಿ 3 ಸಾವಿರ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳಿಂದ ಕನ್ನಡ ಗೀತೆಗಳ ಕೋಟಿ ಕಂಠ ಗಾಯನ ಕಾರ್ಯಕ್ರಮ ಗಮನ ಸೆಳೆಯಿತು.

67ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ `ನನ್ನ ನಾಡು ನನ್ನ ಹಾಡು’ ಕಾರ್ಯಕ್ರಮದಲ್ಲಿ ಮಾತನಾಡಿದ ತಹಸೀಲ್ದಾರ್ ಎಂ.ವಿ.ರೂಪ ಮಾತನಾಡಿ, ಕನ್ನಡ ಭಾಷೆ, ನೆಲಜಲ ಹಾಗೂ ನಾಡು ನುಡಿಯ ಬಗ್ಗೆ ಯುವಜನರು ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಆಂಗ್ಲಭಾಷೆಯನ್ನು ಕೇವಲ ಒಂದು ಭಾಷೆಯಾಗಿ ಮಾತ್ರ ಕಲಿಯಬೇಕು, ಆದರೆ ತಾಯಿ ಭಾಷೆಯಾಗಿರುವ ಕನ್ನಡವನ್ನು ಪ್ರೀತಿಸಿ ಆರಾಧಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷೆ ಮಹಾದೇವಿ ನಂಜುಂಡ, ಕರ್ನಾಟಕ ರಕ್ಷಣಾ ವೇದಿಕೆಯ ಕೆ.ಆರ್.ಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಹೊನ್ನೇನಹಳ್ಳಿ ವೇಣು, ಸಮಾಜ ಸೇವಕ ಡಾ.ಕೆ.ಎಂ.ಶಿವಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಕ್ಷೇತ್ರಶಿಕ್ಷಣಾಧಿಕಾರಿ ಸೀತಾರಾಮ್, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು, ಸಿಡಿಪಿಓ ಅರುಣಕುಮಾರ್, ಪುರಸಭೆ ಮುಖ್ಯಾಧಿಕಾರಿ ಕುಮಾರ್, ಪರಿಸರ ಎಂಜಿನಿಯರ್ ಅರ್ಚನಾಆರಾಧ್ಯ, ಮಹಿಳಾ ಹೋರಾಟಗಾರರಾದ ಮಂಜುಳಾ ಚನ್ನಕೇಶವ, ಸುಕನ್ಯ ರಂಗನಾಥ, ಜಯಮ್ಮ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!