Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಳೆ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನ ಉದ್ಘಾಟನೆ

ನಾಡಪ್ರಭು ಕೆಂಪೇಗೌಡರ 108 ಅಡಿಯ ಕಂಚಿನ ಪ್ರತಿಮೆ ಉದ್ಘಾಟನೆಯ ಅಂಗವಾಗಿ ಜಿಲ್ಲೆಯಲ್ಲಿ ಪ್ರವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಅ.29 ರಂದು ಬೆಳಿಗ್ಗೆ 11.30 ಗಂಟೆಗೆ ಮಂಡ್ಯ ನಗರದ ಶ್ರೀ ಕಾಳಿಕಾಂಭ ದೇವಸ್ಥಾನದಲ್ಲಿ ನಡೆಯಲಿದೆ.

ಶ್ರೀ ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಅಬಕಾರಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ರವರ ಅಧ್ಯಕ್ಷತೆ ಹಾಗೂ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡೆ ಸಚಿವರಾದ ಡಾ. ಕೆ.ಸಿ ನಾರಾಯಣ ಗೌಡ ಅವರ ಘನ ಉಪಸ್ಥಿತಿಯಲ್ಲಿ ಪ್ರವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನ ಕಾರ್ಯಕ್ರಮ ನಡೆಯಲಿದೆ.


ಇದನ್ನೂ ಓದಿ: ನಿಮಿಷಾಂಭ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜ್‍ಕುಮಾರ್


ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು ಎಲ್ಲಾ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!