ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಧಾರಾಕಾರ ಮಳೆಯಿಂದ ಪಾಂಡವಪುರ ತಾಲ್ಲೂಕಿನ ಕೆರೆ ತೊಣ್ಣೂರು ಕೆರೆಯು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿಬಿಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲ ಕೃಷ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುರುವಾರ ಸಂಜೆ ಕೆಂಪೇಗೌಡರ ರಥಯಾತ್ರೆಯ ಸಂಬಂಧ ಜಿ.ಪಂ.ನಲ್ಲಿ ನಡೆದ ಸಭೆಯಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು ಮಳೆಯಿಂದ ಹಾನಿಯಾಗಿರುವ ಕೆರೆ ತೊಣ್ಣೂರಿಗೆ ಭೇಟಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಸಚಿವ ಕೆ.ಗೋಪಾಲಯ್ಯ ಅವರಿಗೆ ಮನವಿ ಮಾಡಿದ್ದರು.
ಸಚಿವರ ಆದೇಶದಂತೆ ಇಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಇಂದು ಅಧಿಕಾರಿಗಳೊಂದಿಗೆ ಕೆರೆ ಪರಿಶೀಲನೆ ನಡೆಸಿ ತುರ್ತಾಗಿ ಆಗಬೇಕಾದ ಕೆಲಸಗಳ ಬಗ್ಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಪಾಂಡವಪುರ ಉಪ ವಿಭಾಗಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ತಹಶೀದ್ದಾರ್ ನಯನ ಸೇರಿದಂತೆ ಇತರರು ಉಪಸ್ಥಿತರಿದ್ದರು.