Thursday, September 19, 2024

ಪ್ರಾಯೋಗಿಕ ಆವೃತ್ತಿ

ಚಿತ್ರದುರ್ಗ: ಭಗತ್‌ಸಿಂಗ್‌ ಗಲ್ಲಿಗೇರುವ ಸನ್ನಿವೇಶ ಅಭ್ಯಾಸ ಮಾಡುವಾಗ ನೇಣಿಗೆ ಸಿಲುಕಿ ವಿದ್ಯಾರ್ಥಿ ಸಾವು

ಕ್ರಾಂತಿಕಾರಿ ಭಗತ್‌ಸಿಂಗ್ ಪಾತ್ರಧಾರಿಯಾಗಿ ಅಭಿನಯಿಸಲು ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ಆಕಸ್ಮಿಕವಾಗಿ ನೇಣಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಭಗತ್ ಸಿಂಗ್ ಗಲ್ಲಿಗೇರುವ ಪಾತ್ರದ ಅಭ್ಯಾಸದ ವೇಳೆ ಆಕಸ್ಮಿಕವಾಗಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಚಿತ್ರದುರ್ಗದ ನಗರದ ಕೆಳಗೋಟೆಯಲ್ಲಿ ಸಾವನ್ನಪ್ಪಿದ್ದಾನೆ. ನಾಗರಾಜ್ ಮತ್ತು ಭಾಗ್ಯಲಕ್ಷ್ಮಿ ದಂಪತಿಯ ಪುತ್ರ ಸಂಜಯ್ ಗೌಡ (12) ಮೃತ ವಿದ್ಯಾರ್ಥಿ.

ಎಸ್.ಎಲ್.ವಿ ಶಿಕ್ಷಣ ಸಂಸ್ಥೆಯಲ್ಲಿ 7ನೇ ತರಗತಿಯಲ್ಲಿ ಸಂಜಯ್‌ ವ್ಯಾಸಂಗ ಮಾಡುತ್ತಿದ್ದನು. ನವೆಂಬರ್‌ 1ರಂದು ರಾಜ್ಯೋತ್ಸವ ಸಮಾರಂಭದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜಯ್, ಭಗತ್ ಸಿಂಗ್ ಪಾತ್ರದಲ್ಲಿ ಅಭಿನಯಿಸಬೇಕಿತ್ತು. ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳುವ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶನಿವಾರ ರಾತ್ರಿ ಮನೆಯಲ್ಲಿ ಪೋಷಕರು ಇಲ್ಲದೇ ಇರುವಾಗ ಸಂಜಯ್, ಭಗತ್ ಸಿಂಗ್ ಪಾತ್ರ ಅಭ್ಯಾಸ ಮಾಡುತ್ತಿದ್ದನು. ನೇಣಿಗೆ ಕೊರಳೊಡ್ಡುವ ಸಂದರ್ಭದ ಅಭಿನಯಕ್ಕೆ ಫ್ಯಾನಿಗೆ ನೂಲಿನ ಹಗ್ಗ ಕಟ್ಟಿಕೊಂಡಿದ್ದನು. ಸ್ಟೂಲ್ ಮೇಲೆ ನಿಂತು ಮುಖವನ್ನು ಟೋಪಿಯಿಂದ ಮುಚ್ಚಿಕೊಂಡು ಅಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಸ್ಟೂಲ್ ಜಾರಿ ನೇಣು ಬಿಗಿದುಕೊಂಡಿದೆ ಎಂದು ಬಡಾವಣೆ ಠಾಣೆಗೆ ನೀಡಿದ ದೂರಿನಲ್ಲಿ ಪೋಷಕರು ವಿವರಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!