ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಲು ನಾನು ಪ್ರಬಲ ಆಕಾಂಕ್ಷಿಯಾಗಿದ್ದು,ವರಿಷ್ಟರು ಆಕಾಂಕ್ಷಿಗಳ ಪೈಕಿ ಯಾರಿಗೆ ಟಿಕೆಟ್ ಕೊಡುತ್ತಾರೋ ಅವರ ಪರ ಕೆಲಸ ಮಾಡುತ್ತೇನೆ ಎಂದು ಮನ್ ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ಹೇಳಿದರು.
ಮಂಡ್ಯ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ.ಕ್ಷೇತ್ರದ ಎಲ್ಲೆಡೆ ಜನರ ಅಭಿಪ್ರಾಯ ಚೆನ್ನಾಗಿದೆ. ಪ್ರತಿ ಗ್ರಾಮದ ಯುವಕರು, ಜನರು ನನ್ನನ್ನು ಕೈ ಹಿಡಿದು ಮುನ್ನಡೆಸುತ್ತಿದ್ದಾರೆ.
ಮಂಡ್ಯ ತಾಲೂಕಿನ ಬಸರಾಳು ಗ್ರಾಮದಲ್ಲಿ ಕಳೆದ 30 ವರ್ಷಗಳಿಂದ ವ್ಯಾಪಾರ ಮಾಡುತ್ತಾ, ಸಾಮಾಜಿಕ ಸೇವೆ ಮಾಡಿಕೊಂಡು ಜನರ ಜೊತೆ ಇದ್ದೇನೆ.ನಾನು ಮಂಡ್ಯ ನಗರದ ಕಲ್ಲಹಳ್ಳಿಯಲ್ಲಿ ವಾಸವಿದ್ದೇನೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಅವರು ನನ್ನ ಬಗ್ಗೆ ತಪ್ಪಾಗಿ ಮಾತನಾಡಿದ್ದಾರೆ. ಅವರು ನನ್ನ ಬ್ರದರ್ ಇದ್ದಂಗೆ ಎಂದು ಹೇಳಿದರು.

ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಪ್ರಾದೇಶಿಕ ಪಕ್ಷವೇ ಪರಿಹಾರವಾಗಿರುವುದರಿಂದ ಜೆಡಿಎಸ್ ಪಕ್ಷವನ್ನು ಸದೃಢಗೊಳಿಸುವುದೇ ನಮ್ಮ ಗುರಿಯಾಗಿದೆ. 2023ಕ್ಕೆ ಎಚ್.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದೇನೆ ಎಂದರು.
ಮಂಡ್ಯ ವಿಧಾನಸಭಾ ಕ್ಷೇತ್ರದ ಗ್ರಾಮಗಳ ಮನೆ- ಮನೆಗೆ ಭೇಟಿ ನೀಡಿ ಜೆಡಿಎಸ್ ಪಕ್ಷದ ಗುರಿ,ಉದ್ದೇಶ ಹಾಗೂ ಕುಮಾರಸ್ವಾಮಿ ಮುಖ್ಯಮಂತ್ರಿ ಅವಧಿಯಲ್ಲಿ ರಾಜ್ಯದ ಜನರಿಗೆ ನೀಡಿದ ಕೊಡುಗೆಗಳನ್ನು ಜನರಿಗೆ ತಿಳಿಸುವ ಮೂಲಕ ಪಕ್ಷವನ್ನು ಸಂಘಟಿಸಿ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಮೂಡಿಸಲಾಗುವುದು ಎಂದರು.
ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮನೆ ಮನೆಗೆ ಕನ್ನಡ ಬಾವುಟ ಅಭಿಯಾನಕ್ಕೆ ಚಾಲನೆ ನೀಡಿದ ಅವರು ಬಸರಾಳು ಹೋಬಳಿ, ಕೆರಗೋಡು ಹೋಬಳಿ,ಮಂಡ್ಯ ನಗರ ಹಾಗೂ ಕಸಬಾ ಹೋಬಳಿಗೂ ಭೇಟಿ ನೀಡಿ ಕನ್ನಡ ಬಾವುಟ ವಿತರಣೆ ಮಾಡಲಾಗಿದ್ದು,ಪ್ರತಿಯೊಬ್ಬರೂ ಮನೆ ಮನೆಯಲ್ಲಿ ಕನ್ನಡ ಬಾವುಟವನ್ನು ಹಾರಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಮನ್ ಮುಲ್ ಉಪಾಧ್ಯಕ್ಷ ಎಂ.ಎಸ್. ರಘುನಂದನ್, ಬಾಲರಾಜು,ಕಲ್ಪನಾ ರಾಮಚಂದ್ರ, ಕೃಷ್ಣೆಗೌಡ, ಪುಟ್ಟಸ್ವಾಮಿ, ಸೇರಿದಂತೆ ಜೆಡಿಎಸ್ ಪಕ್ಷದ ಹಲವು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.




