Thursday, November 19, 2026

ಪ್ರಾಯೋಗಿಕ ಆವೃತ್ತಿ

ಕನ್ನಡ ಭಾಷೆ ಉಳಿಸುವುದು ನಮ್ಮೆಲ್ಲರ ಕರ್ತವ್ಯ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.

ಮಳವಳ್ಳಿ ಪಟ್ಟಣದ ಭಕ್ತ ಕನಕದಾಸ ಕ್ರೀಡಾಂಗಣದಲ್ಲಿ ನಡೆದ 67ನೇ ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇಂದು ಕನ್ನಡ ಭಾಷೆ‌ಗೆ ಧಕ್ಕೆ ಬಂದಿದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವುದು ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿಯಾಗಿದೆ. ರಾಜ್ಯ ಸರ್ಕಾರ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವುದು ಸಂತಸದ ವಿಚಾರ ಎಂದರು.

ತಹಶೀಲ್ದಾರ್ ವಿಜಯಣ್ಣ ಧ್ವಜಾರೋಹಣ ಮಾಡಿ ಮಾತನಾಡಿ, ನಾವೆಲ್ಲರೂ ಸೇರಿ ಇಂದು 67 ನೇ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ್ದೇವೆ. ಕರ್ನಾಟಕ ಸರ್ಕಾರದ ಆದೇಶದಂತೆ ಒಂದೂವರೆ ಕೋಟಿ ಕನ್ನಡಿಗರು ಕನ್ನಡ ಹಾಡನ್ನು ಹೇಳಿ ಅರ್ಥಪೂರ್ಣವಾಗಿ ಆಚರಿಸುವ ಸಂದರ್ಭ ನನಗೆ ಸಂತಸ ತಂದಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುರಸಭಾಧ್ಯಕ್ಷರಾದ ನಾಗರಾಜು, ಉಪಾಧ್ಯಕ್ಷ ಪ್ರಶಾಂತ್ ,ಪುರಸಭೆ ಸದಸ್ಯರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ