Saturday, November 21, 2026

ಪ್ರಾಯೋಗಿಕ ಆವೃತ್ತಿ

ಕನ್ನಡವು ಶ್ರೀಮಂತ ಭಾಷೆಗಳಲ್ಲಿ ಒಂದು : ಎಂ.ವಿ.ರೂಪ

ಪ್ರಾಚೀನವಾಗಿ ಭವ್ಯವಾದ ಇತಿಹಾಸ ಹೊಂದಿರುವ ಕನ್ನಡ ಭಾಷೆಯು ವಿಶ್ವದ ಅತ್ಯಂತ ಶ್ರೀಮಂತ ಭಾಷೆಗಳಲ್ಲಿ ಒಂದಾಗಿದೆ ಎಂದು ತಹಶೀಲ್ದಾರ್ ಎಂ.ವಿ.ರೂಪ ಹೇಳಿದರು.

ಕೃ.ರಾ.ಪೇಟೆ ತಾಲ್ಲೂಕು ಆಡಳಿತದ ವತಿಯಿಂದ ಪಟ್ಟಣದಲ್ಲಿ ನಡೆದ 67ನೇ ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದಿರುವ ಕನ್ನಡ ಭಾಷೆ ಹೆಮ್ಮೆಯ ಭಾಷೆಯಾಗಿದೆ, ಕವಿಗಳು, ಸಾಹಿತಿಗಳು, ವಿಮರ್ಶಕರು ಸಾವಿರಾರು ಗ್ರಂಥಗಳು, ವಿಮರ್ಶನ ಕೃತಿಗಳು, ಕಾದಂಬರಿಗಳು ಹಾಗೂ ಕವನಗಳನ್ನು ರಚಿಸಿ ಕನ್ನಡ ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸಿದ್ದಾರೆ ಎಂದರು.

ಕರ್ನಾಟಕ ಏಕೀಕರಣದ ನಂತರ ಕರ್ನಾಟಕ ರಾಜ್ಯವು ಉದಯವಾಗಿ 67 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಮೈಸೂರು ರಾಜ್ಯವು ಕರ್ನಾಟಕವೆಂದು ಪುನರ್ ನಾಮಕರಣಗೊಂಡ ಈ ಶುಭ ದಿನದಂದು ನಾಡಿನಾದ್ಯಂತ ಅತ್ಯಂತ ವಿಜೃಂಭಣೆಯಿಂದ ರಾಜ್ಯೋತ್ಸವವನ್ನು ಹಬ್ಬದಂತೆ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ತಾಲ್ಲೂಕು ಕಸಾಪ ಅಧ್ಯಕ್ಷ ಪೂರ್ಣಚಂದ್ರತೇಜಸ್ವಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ‌.ಶಿವರಾಮೇಗೌಡ, ಪುರಸಭೆ ಉಪಾಧ್ಯಕ್ಷೆ ಗಾಯತ್ರಿ ಸುಬ್ಬಣ್ಣ, ಮುಖ್ಯಾಧಿಕಾರಿ ಕುಮಾರ್, ತಾ.ಪಂ. ಇಓ ಸತೀಶ್, ಬಿಇಓ ಆರ್.ಎಸ್.ಸೀತಾರಾಮ್, ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಹೊನ್ನೇನಹಳ್ಳಿ ವೇಣು, ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಸೋಮಶೇಖರ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ