ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಪಶುಪಾಲನ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ವೈಜ್ಞಾನಿಕ ಹೈನುಗಾರಿಕೆ, ಕುರಿ, ಮೇಕೆ ಹಾಗೂ ಕೋಳಿ ಸಾಕಾಣಿಕೆ ವಿಷಯದಲ್ಲಿ ನವೆಂಬರ್ 4 ರಿಂದ 29 ರವರೆಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತಿಯುಳ್ಳ ರೈತರು ಮಳವಳ್ಳಿಯ ಪಶು ಫಾರಂ ಹತ್ತಿರ ಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರಕ್ಕೆ ತರಬೇತಿ ಪ್ರಾರಂಭವಾಗುವ ದಿನದಂದು ಬೆಳಗ್ಗೆ 10.30 ಗಂಟೆಗೆ ಹಾಜರಾಗಬಹುದು. ತರಬೇತಿಗೆ ಯಾವುದೇ ಶುಲ್ಕವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ ಕಚೇರಿಯ ದೂ.ಸಂ.08231 244233 ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿ ಪ್ರಕಟಣೆ ತಿಳಿಸಿದೆ.