Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾನೂನು ಅರಿವಿನಿಂದ ನಾಗರೀಕರ ಸಬಲೀಕರಣ : ನ್ಯಾ.ಬಿ.ಜಿ.ರಮಾ

ಸರ್ಕಾರದ ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸೌಲಭ್ಯಗಳ ಬಗ್ಗೆ ಹಾಗೂ ಕಾನೂನುಗಳ ಬಗ್ಗೆ ಅರಿವು ಮೂಡಿದರೆ ನಾಗರೀಕರ ಸಬಲೀಕರಣವಾಗಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ ತಿಳಿಸಿದರು.

ಮಂಡ್ಯ ತಾಲ್ಲೂಕಿನ ಮುದ್ದುಂಗರೆ ಗ್ರಾಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೋಲಿಸ್ ಇಲಾಖೆ, ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ  ಮಹಿಳಾ ಸರ್ಕಾರಿ ಕಾಲೇಜು (ಸ್ವಾಯತ್ತ) ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕಾನೂನು ಅರಿವು ಮೂಲಕ ನಾಗರೀಕರ ಸಬಲೀಕರಣ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು‌

ಸಾರ್ವಜನಿಕರಿಗೆ ಸುಲಭವಾಗಿ ಸೇವೆ ಒದಗಿಸುವ ಕಾರ್ಯವಾಗಬೇಕು. ಮಾಹಿತಿ ಕೊರತೆಯಿಂದಾಗಿ ಸಾರ್ವಜನಿಕರು ಪದೇ ಪದೇ ಕಚೇರಿಗೆ ಅಲೆದಾಡುವದನ್ನು ತಪ್ಪಿಸಬೇಕು. ಕಾನೂನು ಅರಿವಿನ ಮೂಲಕ ನಾಗರೀಕರ ಸಬಲೀಕರಣ ಎಂಬಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರೊಂದಿಗೆ ಬೆರೆಯುವಂತಹ ಸಂದರ್ಭ ಸಿಗುತ್ತದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಅನೇಕ ಕಾರ್ಯಚಟುವಟಿಕೆಗಳಲ್ಲಿ ಸರ್ಕಾರದ ಉದ್ದೇಶಗಳನ್ನು ಜನಸಾಮಾನ್ಯರಿಗೆ ತಿಳಿಸುವಂತಹ ಕಾರ್ಯಕ್ರಮಗಳಾಗಿವೆ. ನ್ಯಾಯಾಧೀಶರು ಅವರ ಕೆಲಸದ ಜೊತೆಗೆ ಈ ರೀತಿಯ ಕಾರ್ಯಕ್ರಮಗಳನ್ನು ಮಾಡುವಂತಹದ್ದು ಕಠಿಣವಾದ ಹಿನ್ನೆಲೆಯಲ್ಲಿ, ಪ್ರತಿಯೊಂದು ಜಿಲ್ಲೆಯಲ್ಲಿಯೂ ಸಹ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸ್ಥಾಪಿಸಿ ಸದಸ್ಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ ಎಂದರು.

ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಘಟಕದ ವತಿಯಿಂದಲೂ ಸಹ ಸರ್ಕಾರದ ಸವಲತ್ತುಗಳನ್ನು ಸಾರ್ವಜನಿಕರಿಗೆ ತಲುಪಿಸುವಂತಹ ಅರಿವು ಕಾರ್ಯಕ್ರಮ ಹಾಗೂ ಸವಲತ್ತುಗಳನ್ನು ಒದಗಿಸಿ ಕೊಡುವಂತಹ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.

ಕೋವಿಡ್ ಸಂದರ್ಭದಲ್ಲಿ ಜನಸಾಮಾನ್ಯರು ಚಿಕಿತ್ಸೆಗಾಗಿ ಲಕ್ಷಾಂತರ ರೂ.ವನ್ನು ಕಟ್ಟಬೇಕಾಗಿತ್ತು. ಆದರೆ ಆಯುಷ್ಮಾನ್ ಯೋಜನೆ ಮೂಲಕ ಕಡಿಮೆ ವೆಚ್ಚದಲ್ಲಿ ಮತ್ತು ಉಚಿತವಾಗಿ ಚಿಕಿತ್ಸೆಯನ್ನು ನೀಡುವಂತಾಯಿತು. ಜನರಿಗೆ ಇಂತಹ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಅವಶ್ಯಕ‌ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ‌ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಳಿನಿಕುಮಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!