ಸಾರ್ವಜನಿಕರು ಇದೇ ನ.9ರಂದು ಪ್ರಕಟಣೆಗೊಳ್ಳಲಿರುವ ಕರಡು ಮತದಾರರ ಪಟ್ಟಿಯನ್ನು ಪರೀಕ್ಷಿಸಿ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಹೆಸರನ್ನು ತೆಗೆದುಹಾಕಲು ಅಥವಾ ವರ್ಗಾವಣೆ ಮಾಡಲು ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ (ಬಿ.ಎಲ್.ಓ)ಗಳ ಬಳಿ ಅವಶ್ಯವಿರುವ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. Voters Helpine App ಅಥವಾ www.nvsp.inನಲ್ಲಿ ಅನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಕರಡು ಮತದಾರರ ಪಟ್ಟಿಯ ಪ್ರಕಟಣೆ ನ.9 ಪ್ರಕಟವಾಗಲಿದ್ದು, ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ನ.9 ರಿಂದ ಡಿಸೆಂಬರ್ 8 ರವರೆಗೆ ಅವಕಾಶ ನೀಡಲಾಗಿದೆ. ವಿಶೇಷ ಅಭಿಯಾನವು ನ.12, 20, ಡಿ.3, 4 ನಡೆಯಲಿದ್ದು, ಅಂತಿಮ ಮತದಾರರ ಪಟ್ಟಿಯ ಪ್ರಕಟಣೆ ಜನವರಿ 5, 2023ರಂದು ಪ್ರಕಟವಾಗಲಿದೆ, ಮತದಾರರು ಇದರ ಸದುಪಯೋಗ ಪಡೆದುಕೊಳ್ಳಬಹುದು.