Friday, November 20, 2026

ಪ್ರಾಯೋಗಿಕ ಆವೃತ್ತಿ

ಕರಡು ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ? 

ಜಿಲ್ಲಾಡಳಿತವು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಿದೆ, ಅದರಲ್ಲಿ ನಿಮ್ಮ ಸೇರಿದೆಯೇ ನೋಡಿಕೊಳ್ಳಿ, ಇಲ್ಲದಿದ್ದರೆ ಅಥವಾ ಪರಿಷ್ಕರಣೆ ಮಾಡಬೇಕಿದ್ದರೆ, ಒಂದು ತಿಂಗಳ ಅವಧಿಯಲ್ಲಿ ಈ ಕೆಲಸವನ್ನು ಮಾಡಿಕೊಳ್ಳಲು ಜಿಲ್ಲಾಡಳಿತ ಗಡುವು ನೀಡಿದೆ.

ಮಂಡ್ಯ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿಗಳಲ್ಲಿ ಕರಡು ಮತದಾರರು‌ ಪಟ್ಟಿಯನ್ನು ಪ್ರಕಟಿಸಲಾಗಿದೆ.  ಮತದಾರರು ತಪ್ಪದೇ ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಗೋಪಾಲಕೃಷ್ಣ ಎಚ್.ಎನ್.ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸೈಕಲ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಮತದಾರರ ಹೆಸರು ಬಿಟ್ಟು ಹೋಗಿದ್ದಲ್ಲಿ ಸೇರ್ಪಡೆ, ಮೊಬೈಲ್ ಸಂಖ್ಯೆ ಬದಲಾವಣೆ, ವಿಳಾಸ ಬದಲಾವಣೆ, ಹೊಸದಾಗಿ ಹೆಸರು ಸೇರ್ಪಡೆಗೆ ಒಂದು ತಿಂಗಳು ಕಾಲ ಅವಕಾಶ ವಿದ್ದು, ಬಿ.ಎಲ್‌.ಒ ಗಳಿಗೆ ನಿಗದಿತ ಅರ್ಜಿ ಸಲ್ಲಿಸಿ ಎಂದರು.

ಮಂಡ್ಯ ಜಿಲ್ಲೆಯಲ್ಲಿ 14,77,951 ಮತದಾರರಿದ್ದಾರೆ, ಅವರಲ್ಲಿ 7,35,082 ಪುರುಷ ಹಾಗೂ 7,42,869 ಮಹಿಳಾ ಮತದಾರರಿದ್ದಾರೆ. 1-1-2023 ಕ್ಕೆ ಅರ್ಹ ಮತದಾರರನ್ನು ಸೇರ್ಪಡೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ಚುನಾವಣಾ ಆಯೋಗದ ನಿರ್ದೇಶನದಂತೆ 17 ವರ್ಷ ತುಂಬಿರುವವರು ಸಹ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗಾಗಿ ಅರ್ಜಿ ಸಲ್ಲಿಸಬಹುದು. ವರ್ಷದಲ್ಲಿ 3 ಬಾರಿ ‌ಪರಿಷ್ಕರಣೆ ನಡೆಯುತ್ತದೆ. ಅಂತಹ ಸಂದರ್ಭದಲ್ಲಿ ಅರ್ಜಿಗಳನ್ನು‌ ಪರಿಶೀಲಿಸಿ ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸಲಾಗುವುದು ಎಂದರು.

ಜಿ.ಪಂ. ಸಿಇಓ ಶಾಂತ ಎಲ್.ಹುಲ್ಮನಿ ಮಾತನಾಡಿ, ಪ್ರತಿ‌ ಮತವು ಅಮೂಲ್ಯ. ಯಾವುದೇ ಮತದಾರರು ಮತದಾನದ ಪ್ರಕ್ರಿಯೆಯಿಂದ ಹೊರಗೆ ಉಳಿಯಬಾರದು ಎಂದು‌ ಜಾಗೃತಿ ಹಾಗೂ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಸ ಸಂಗ್ರಹಣೆಯ ಸ್ವಚ್ಛತಾ ವಾಹನಗಳ ಮೂಲಕ ಗ್ರಾಮ, ವಾಡ್೯ಗಳ ಮನೆ ಮನೆ ಗಳಿಗೂ ಮತದಾನದ ಮಹತ್ವದ ಮಾಹಿತಿಯನ್ನು ತಲುಪಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ‌ಜಿಲ್ಲಾ ಪೊಲೀಸ್ ‌ವರಿಷ್ಠಾಧಿಕಾರಿ ಯತೀಶ್, ಉಪವಿಭಾಗಾಧಿಕಾರಿ ಕೀರ್ತನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಎಸ್.ಎಚ್, ತಹಶೀಲ್ದಾರ್ ಕುಂಞ ಅಹಮದ್, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ವೇಣುಗೋಪಾಲ್ ಸೇರಿದಂತೆ ಇನ್ನಿತರ ‌ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ