Thursday, September 19, 2024

ಪ್ರಾಯೋಗಿಕ ಆವೃತ್ತಿ

ಜೈಲಿನ ಖೈದಿಗಳ ಹಕ್ಕಿನ ಬಗ್ಗೆ ಜಾಗೃತಿ : ನ್ಯಾ.ಬಿ.ಜಿ.ರಮಾ

ಜೈಲಿನ ಖೈದಿಗಳಿಗೂ ಸಹ ಹಕ್ಕುಗಳಿವೆ. ಜೈಲಿನ ಖೈದಿಗಳ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ ತಿಳಿಸಿದರು.

ಮಂಡ್ಯ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ `ಹಕ್ ಹಮಾರಾ ಬಿ ಹೈ’ ಕಾನೂನು ಅರಿವು ಜಾಥಾ ಉದ್ಘಾಟಿಸಿ ಮಾತನಾಡಿದರು.

ಪ್ರತಿ ವರ್ಷ ನ.9ರಂದು ಕಾನೂನು ಸೇವೆಗಳ ದಿನಾಚರಣೆ ಆಚರಣೆ ಮಾಡುತ್ತೇವೆ. ಸಾರ್ವಜನಿಕರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವುದು ಕಾನೂನು ಸೇವೆಗಳ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ. ಕಾನೂನಿನ ಅರಿವು ಪ್ರತಿ ಹಳ್ಳಿಯ ಸಾರ್ವಜನಿಕರಿಗೂ ಸಹ ತಿಳಿಯಬೇಕು ಎಂಬ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದೇವೆ ಎಂದರು.

`ಹಕ್ ಅಮರ ಬಿ ಹೈ’ ಎನ್ನುವ ಕಾರ್ಯಕ್ರಮದ ಅಡಿಯಲ್ಲಿ ಜೈಲಿನಲ್ಲಿರುವ ಕೈದಿಗಳ ಹಕ್ಕುಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು, ಅವರ ಹಕ್ಕುಗಳು ರಕ್ಷಣೆ ಅಥವಾ ಉಲ್ಲಂಘನೆ ಆಗುತ್ತಿರುವುದೇ ? ಎಂಬ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಳಿನಿ ಕುಮಾರಿ, ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ, ಜಿ.ಪಂ.ಸಿಇಓ ಶಾಂತ ಎಲ್. ಹುಲ್ಮನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಮಿಮ್ಸ್ ನಿರ್ದೇಶಕ ಡಾ.ಮಹೇಂದ್ರ, ವಕೀಲ ಸಂಘದ ಅಧ್ಯಕ್ಷ ರಾಜೇಂದ್ರ, ಕಾರ್ಯದರ್ಶಿ ಸಿದ್ದರಾಜು, ಖಜಾಂಚಿ ಬಿ.ಎಂ ಮಹೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!