Thursday, September 19, 2024

ಪ್ರಾಯೋಗಿಕ ಆವೃತ್ತಿ

ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಎಲ್ಲಾ ಅಪರಾಧಿಗಳ ಬಿಡುಗಡೆಗೆ ಸುಪ್ರೀಂಕೋರ್ಟ್ ಆದೇಶ

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳನ್ನು ಅವರ ಅವಧಿ ಪೂರ್ಣಗೊಳ್ಳುವ ಮೊದಲು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ. ಸುಪ್ರೀಂ ಕೋರ್ಟ್ ನ ಈ ತೀರ್ಪನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಟೀಕಿಸಿದೆ.

“ನಮ್ಮ ಮುಂದೆ ಇರುವ ಅರ್ಜಿದಾರರಿಗೆ ಸಂಬಂಧಿಸಿದಂತೆ, ವಿಳಂಬದ ಕಾರಣದಿಂದಾಗಿ ಅವರ ಮರಣದಂಡನೆಯನ್ನು ಜೀವಾವಧಿಗೆ ಬದಲಾಯಿಸಲಾಗಿದೆ. ಎಲ್ಲಾ ಮೇಲ್ಮನವಿದಾರರು ತಮ್ಮ ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂದು ನಾವು ಭಾವಿಸುತ್ತೇವೆ” ಅಗತ್ಯವಿದ್ದಲ್ಲಿ ಅರ್ಜಿದಾರರನ್ನು ಬಿಡುಗಡೆ ಮಾಡಲು ನಿರ್ದೇಶಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ಉಲ್ಲೇಖಿಸಿದೆ.

ಈ ಪ್ರಕರಣದಲ್ಲಿ ಅಪರಾಧಿಗಳಾದ ನಳಿನಿ ಶ್ರೀಹರನ್, ರಾಬರ್ಟ್ ಪೈಸ್, ಆರ್.ಪಿ.ರವಿಚಂದ್ರನ್, ಜಯಕುಮಾರ್ ಮತ್ತು ಸಂತನ್ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಜೂನ್‌ನಲ್ಲಿ ಮದ್ರಾಸ್ ಹೈಕೋರ್ಟ್ ತಮ್ಮ ಮನವಿಯನ್ನು ತಿರಸ್ಕರಿಸಿದ ನಂತರ ನಳಿನಿ ಮತ್ತು ರವಿಚಂದ್ರನ್ ಅವರು ಅವಧಿ ಪೂರ್ವ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅಪರಾಧಿಗಳು ಸಹ ಅಪರಾಧಿ ಪೆರಾರಿವಾಲನ್‌ನನ್ನು ಅವಧಿಗೆ ಮುನ್ನ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿದ್ದರು. ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ ಅಸಾಧಾರಣ ಅಧಿಕಾರವನ್ನು ಬಳಸಿ ಸುಪ್ರೀಂ ಕೋರ್ಟ್ ಈ ವರ್ಷ ಮೇ.18 ರಂದು ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಿತ್ತು.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಮೇ.21, 1991ರಂದು ತಮಿಳುನಾಡಿನ ಪೆರಂಬದೂರಿನಲ್ಲಿ ಹತ್ಯೆ ಮಾಡಲಾಗಿತ್ತು. ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವ ಸುಪ್ರೀಂಕೋರ್ಟ್ ತೀರ್ಪನ್ನು ಕಾಂಗ್ರೆಸ್ “ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ” ಎಂದು ತಿಳಿಸಿದೆ.

“ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಉಳಿದ ಹಂತಕರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್‌ನ ನಿರ್ಧಾರವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ, ಸಂಪೂರ್ಣವಾಗಿ ತಪ್ಪಾಗಿದೆ. ಕಾಂಗ್ರೆಸ್ ಪಕ್ಷವು ಈ ತೀರ್ಪನ್ನು ಸ್ಪಷ್ಟವಾಗಿ ಟೀಕಿಸುತ್ತದೆ ಮತ್ತು ಈ ತೀರ್ಪು ಸಂಪೂರ್ಣವಾಗಿ ಅಸಮರ್ಥನೀಯವಾಗಿದೆ. ಇದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಜೈರಾಮ್ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“>

ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುದುಚೇರಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ತನ್ನ ತಂದೆಯ ಹಂತಕರನ್ನು ಕ್ಷಮಿಸಿದ್ದೇನೆ ಎಂದು ಹೇಳಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!