Thursday, September 19, 2024

ಪ್ರಾಯೋಗಿಕ ಆವೃತ್ತಿ

ಯುವಕರಿಗೆ ಉದ್ಯೋಗ ಕಲ್ಪಿಸಲು ಕ್ರಮ : ಫೈಟರ್ ರವಿ 

ಮುಂದಿನ ದಿನಗಳಲ್ಲಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಿ, ನನ್ನ ಕೈಲಾದ ಮಟ್ಟಿಗೆ ಬದಲಾವಣೆ ಮಾಡುತ್ತೇನೆ, ಈ ನಿಟ್ಟಿನಲ್ಲಿ ನಿಮ್ಮೆಲ್ಲರ ಸಹಕಾರ ನನಗೆ ಬೇಕು ಎಂದು ಸಮಾಜ ಸೇವಕ ಫೈಟರ್ ರವಿ ಹೇಳಿದರು.

ನಾಗಮಂಗಲದ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೂತನ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ನನ್ನ ಮುಖ್ಯ ಉದ್ದೇಶ ಶುದ್ಧ ನೀರು ಹಾಗೂ ಅರೋಗ್ಯ ಕಲ್ಪಿಸಿಕೊಡುವುದು, ನಾಗಮಂಗಲ ತಾಲ್ಲೂಕಿನಲ್ಲಿ ಅರೋಗ್ಯ ಶಿಬಿರ ಆಯೋಜನೆ ಮಾಡಿ, ಇಪ್ಪತ್ತು ಸಾವಿರಕ್ಕೂ ಹೆಚ್ವು ಜನರಿಗೆ ಚಿಕಿತ್ಸೆ ಕೊಡಿಸಿ ನಾಲ್ಕು ಸಾವಿರ ಜನರಿಗೆ ಶಸ್ತ್ರಚಿಕಿತ್ಸೆ ಮಾಡಿಸಿದ್ದೇನೆ, ಹಾಗೆ ಸುಮಾರು 70ಕ್ಕೂ ಹೆಚ್ಚು ಶುದ್ಧ ನೀರಿನ ಘಟಕಗಳನ್ನ ನಿರ್ಮಾಣ ಮಾಡಿಕೊಟ್ಟಿದ್ದೇನೆ ಎಂದರು.

ಪ್ರಾಂಶುಪಾಲ ತೆಜೋಮೂರ್ತಿ ಮಾತನಾಡಿ, ಸುಮಾರು ಹತ್ತು ಲಕ್ಷ ರೂಪಾಯಿ ಮೌಲ್ಯದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿ ಕೊಟ್ಟು, ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ, ಈ ವಿಚಾರವಾಗಿ ತಾಲೂಕಿನ ನಾಯಕರಿಗೆ ಹಲವು ಬಾರಿ ಮನವಿ ಮಾಡಿದ್ದರು, ಕೂಡ ಯಾವುದೇ ರೀತಿಯ ಸಹಕಾರ ಮಾಡಿರಲಿಲ್ಲ ಎಂದರು.

ಈ ಸಂದರ್ಭದಲ್ಲಿ ಕಾಲೇಜು ವತಿಯಿಂದ ರವಿಯವರಿಗೆ ಶಾಲು ಹೊದಿಸಿ, ಪೇಟ ತೊಡಿಸಿ ಸನ್ಮಾನಿಸಲಾಯಿತು. ಪತ್ರಕರ್ತ ಸಂಘದ ಅಧ್ಯಕ್ಷ ಜಯರಾಮ್, ಸಿಂಗಾರಿಗೌಡ, ಸಿ.ಜೆ.ಕುಮಾರ್ ಪಾಲ್ಗೊಂಡಿದ್ದರು,

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!