ರಾಷ್ಟೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಪಟುವೊಬ್ಬರು ನಾಲೆಗೆ ಬಿದ್ದು ಸಾವಿಗೀಡಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಬಳಿ ನಡೆದಿದೆ.
ಪಾಂಡಿಚೇರಿ ಮೂಲದ ಆಲ್ಹರ್ಶ್ (17) ಮೃತ ಕ್ರೀಡಾಪಟು.
ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಸೈಕಲ್ ಪೋಲೋ ಕ್ರೀಡಾಕೂಟಕ್ಕೆ ಹೊರ ರಾಜ್ಯದಿಂದ ಆಗಮಿಸಿದ ಈತ, ಕ್ರೀಡಾಕೂಟದ ಅಣತಿ ದೂರದ ನಾಲೆಗೆ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾನೆ.
ಶೋಧ ಕಾರ್ಯ ನಡೆಸಿ ನಾಲೆಯಿಂದ ಮೃತದೇಹವನ್ನು ಅಗ್ನಿಶಾಮಕದಳ ಸಿಬ್ಬಂದಿ ಹೊರ ತೆಗೆದರು. ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲದ ಕಾರಣ ನಾಲೆಗೆ ಹೋಗಿ ಕ್ರೀಡಾಪಟುವೊಬ್ಬ ಪ್ರಾಣ ಕಳೆದುಕೊಂಡಿದ್ದಾನೆಂದು ಸ್ಥಳೀಯರು ಆರೋಪಿಸಿದ್ದಾರೆ. ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.