Thursday, November 19, 2026

ಪ್ರಾಯೋಗಿಕ ಆವೃತ್ತಿ

ಮೂಲಭೂತ ಸೌಲಭ್ಯ ಕಲ್ಪಿಸಲು ಆದ್ಯತೆ : ಎಂ.ಶ್ರೀನಿವಾಸ್

ಮಂಡ್ಯ ನಗರವ್ಯಾಪ್ತಿಯ ಸರ್ಕಾರಿ ಶಾಲೆಗಳ ಅಭಿವೃದ್ದಿ ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ, ಖಾಸಗಿ ಶಾಲೆಗಳತ್ತ ತೆರಳುವ ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ನಿಟ್ಟಿನಲ್ಲಿ ಪೋಷಕರ ಗಮನ ಸೆಳೆಯಲು ಅನೇಕ ಕಾರ್ಯಕ್ರಮ ಆಯೋಜಿಸಿದ್ದೇವೆ ಎಂದು ಶಾಸಕ ಎಂ.ಶ್ರೀನಿವಾಸ್ ಹೇಳಿದರು.

ಮಂಡ್ಯ ನಗರದ ಕಲ್ಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಇಲಾಖೆಯ ವಿವೇಕ ಯೋಜನೆಯಡಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ 2 ಶಾಲಾ ಕೊಠಡಿಗೆ ನಗರಸಭೆ ಅಧ್ಯಕ್ಷರು-ಸದಸ್ಯರು, ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ, ಸರ್ಕಾರಿ ವಿದ್ಯಾಸಂಸ್ಥೆಗಳು ಖಾಸಗಿ ಶಾಲೆಗಳಂತೆ ಉತ್ತಮ ಮೂಲ ಸೌಲಭ್ಯ ಹೊಂದಿರಬೇಕೆಂದು ನಮ್ಮ ಆಶಯವಾಗಿದೆ ಎಂದರು.

ಶಿಕ್ಷಣ ಇಲಾಖೆ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಾಂತ ಮಾತನಾಡಿ, ಕಲ್ಲಹಳ್ಳಿ ಸರ್ಕಾರಿ ಶಾಲಾ ಆವರಣದಲ್ಲಿ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಇದನ್ನು ಕೆಡವಿ 2 ನೂತನ ಕೊಠಡಿಗಳನ್ನು ನಿರ್ಮಿಸಲು ಶಾಸಕರು ಮತ್ತು ಸ್ಥಳೀಯ ನಗರಸಭಾ ಆಡಳಿತ ಮಂಡಳಿವರೊಂದಿಗೆ ಭೂಮಿ ಪೂಜೆ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷ ಮಂಜು, ಉಪಾಧ್ಯಕ್ಷೆ ಫಾತೀಮಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ ಪುಟ್ಟಸ್ವಾಮಿ, ಸದಸ್ಯರಾದ ರವಿ, ನಾಗೇಶ್, ಮುಖ್ಯ ಶಿಕ್ಷಕ ಕೃಷ್ಣ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಮಂಜುಳ, ಸದಸ್ಯರಾದ ನಾಗಮಣಿ, ನಾಗಮ್ಮ, ಎಇಇ ಲೇಕೇಶ್, ಸ್ಥಳೀಯ ಮುಖಂಡ ಶ್ರೀಧರ್ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ