Tuesday, November 24, 2026

ಪ್ರಾಯೋಗಿಕ ಆವೃತ್ತಿ

ಬೀದಿನಾಟಕದ ಮೂಲಕ ಜಾಗೃತಿ ಕಾರ್ಯಕ್ರಮ

ಮಂಡ್ಯ ತಾಲೂಕಿನ ಹಲ್ಲೆಗೆರೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹೊಸಳ್ಳಿ ಇವರ ವತಿಯಿಂದ ಬೀದಿ ನಾಟಕದ ಮೂಲಕ ಜಾಗೃತಿ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯತಿ ಅಧ್ಯಕ್ಷ ನಾಗರಾಜು ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪುಟ್ಟರಾಜು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಒಕ್ಕೂಟದ ಅಧ್ಯಕ್ಷ ಅಶೋಕ್, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸುಧಾ ಕೃಷ್ಣೇಗೌಡ ಉಪಸ್ಥಿತರಿದ್ದರು.

ಯೋಜನೆಯ ಸಮನ್ವಯಾಧಿಕಾರಿ ಶೋಭಾ ಮಾತನಾಡಿ, ಹೆಣ್ಣು ಮಕ್ಕಳು ಶುಚಿತ್ವ ಕಾಪಾಡುವ ಜೊತೆಗೆ ಉಳಿತಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಇದರಿಂದಾಗಿ ಮನೆಯ ಅಭಿವೃದ್ಧಿ ಮತ್ತು ಮಕ್ಕಳ ವಿದ್ಯಾಭ್ಯಾಸ ಉತ್ತಮವಾಗಿರುತ್ತದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡುವ ಜೊತೆಗೆ 21 ವಯಸ್ಸಿನ ನಂತರ ಮದುವೆ ಮಾಡಬೇಕು ಎಂದರು.

ಕೆರಗೋಡು ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಹಾಜರಿದ್ದರು, ನಂತರ ಬೀದಿ ನಾಟಕ ಪ್ರದರ್ಶಿಸಿದ ಹನಿಯಂಬಾಡಿ ಎನ್.ಶೇಖರ್ ನೇತೃತ್ವದ ಸೌಹಾರ್ದ ಸಾಂಸ್ಕೃತಿಕ ಕಲಾಸಂಘದ ಸದಸ್ಯರು ಗ್ರಾಮಸ್ಥರಿಗೆ ಜಾಗೃತಿ ಮೂಡಿಸಿದರು. ಕಲಾವಿದರಾದ ವೈರಮುಡಿ, ಪ್ರಸನ್ನ ಕುಮಾರ್, ಸುಕನ್ಯಾ, ರೋಸ್ ಮೇರಿ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ