ಪಾಂಡವಪುರ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ನ. 25, 26,27 ರಂದು ಪುನೀತೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಶಾಸಕ ಸಿ.ಎಸ್. ಪುಟ್ಟರಾಜು ತಿಳಿಸಿದರು.
ಪಾಂಡವಪುರ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕನ್ನಡ ಚಿತ್ರರಂಗ ಕಂಡ ಮೇರು ನಟ ಪುನೀತ್ ರಾಜ್‍ಕುಮಾರ್ ಅವರನ್ನು ಸ್ಮರಿಸುವ ಭಾಗವಾಗಿ ಅದ್ದೂರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಪುನೀತೋತ್ಸವ ಕಾರ್ಯಕ್ರಮದಲ್ಲಿ ಡಾ. ರಾಜ್ ಕುಟುಂಬದ ಅಶ್ವಿನಿ ಪುನೀತ್ ರಾಜ್‍ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಮೂರು ದಿನಗಳ ಕಾಲ ಅಪ್ಪು ನೆನಪಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ಕನ್ನಡ ಚಿತ್ರರಂಗದ ಖ್ಯಾತ ನಟ, ನಟಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.
ಅತಂತ್ರ ಪರಿಸ್ಥಿತಿ ಬರಲ್ಲ
ಯಾವುದೇ ಕಾರಣಕ್ಕೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವುದಿಲ್ಲ.
ನೂರಕ್ಕೆ ನೂರರಷ್ಟು ಕುಮಾರಸ್ವಾಮಿ ಸಿಎಂ ಆಗುವುದು ಖಚಿತ ಎಂದರು.
ಜೆಡಿಎಸ್ ಬಿಟ್ಟು ಹೋದವರೆಲ್ಲಾ ಮತ್ತೆ ವಾಪಾಸ್ ಬರ್ತಿದ್ದಾರೆ. ಕಳೆದ ಬಾರಿ ಕೆಆರ್ ಪೇಟೆಯಲ್ಲಿ ದುಡ್ಡಿನ ಪ್ರಭಾವಿದಿಂದ ಸೋಲಾಗಿತ್ತು. ಆದರೆ ಈ ಬಾರಿ ಸಮರ್ಥ ಅಭ್ಯರ್ಥಿಗಳಿದ್ದಾರೆ, ಸಾಕಷ್ಟು ಅಂತರದಿಂದ ಗೆಲ್ತೇವೆ. ಜಿಲ್ಲೆಯಲ್ಲಿ ಈ ಬಾರಿಯೂ 7ಕ್ಕೆ 7 ಸ್ಥಾನಗಳಲ್ಲಿ ಜೆಡಿಎಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗೋಷ್ಠಿಯಲ್ಲಿ ಪುರಸಭೆ ಅಧ್ಯಕ್ಷೆ ಅರ್ಚನಾ ಚಂದ್ರು, ಸದಸ್ಯರಾದ ಬಿ.ವೈ.ಬಾಬು, ಶಿವಣ್ಣ, ಇಮ್ರಾನ್, ಶಿವಕುಮಾರ್, ಚಂದ್ರು, ತಾಲ್ಲೂಕು ಕಸಾಪ ಅಧ್ಯಕ್ಷ ಮೇನಾಗರ ಪ್ರಕಾಶ್ ಉಪಸ್ಥಿತರಿದ್ದರು.




