Tuesday, November 24, 2026

ಪ್ರಾಯೋಗಿಕ ಆವೃತ್ತಿ

ನ.26ಕ್ಕೆ ರಾಜ್ಯ ಮಟ್ಟದ ಮಡಿವಾಳ ಮಾಚಿದೇವರ ವಚನ ಗಾಯನೋತ್ಸವ

ಮಂಡ್ಯನಗರದ ಕರ್ನಾಟಕ ಸಂಘದ ಕೆ.ವಿ.ಶಂಕರೇಗೌಡ ಶತಮಾನೋತ್ಸವ ಭವನದಲ್ಲಿ ನ.26ರಂದು ಬೆಳಿಗ್ಗೆ 10 ಗಂಟೆಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಶ್ರೀಮಡಿವಾಳ ಮಾಚಿದೇವರ ವಚನ ಗಾಯನೋತ್ಸವ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಡಿವಾಳ ಮಾಚಿದೇವರ ಸಂಘದ ಅಧ್ಯಕ್ಷ ವೆಂಕಟೇಶ್ ಹಳುವಾಡಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಚನ ಗಾಯನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ  ಪ್ರಥಮ ಬಹುಮಾನವಾಗಿ  20,000 ರೂ., ದ್ವಿತೀಯ ಬಹುಮಾನವಾಗಿ 15,000 ರೂ. ಹಾಗೂ ತೃತೀಯ ಬಹುಮಾನವಾಗಿ 10,000 ರೂ.ಬಹುಮಾನ ನೀಡಲಾಗುವುದು. ಆಸಕ್ತರು 501 ರೂ. ಪ್ರವೇಶ ಶುಲ್ಕ ಪಾವತಿಸಿ ನೋಂದಾಯಿಸಿಕೊಳ್ಳಬಹುದು. ಸ್ಥಳದಲ್ಲಿಯೇ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಮೊ.9738400462, 9148055796, 9148538802 ಸಂಪರ್ಕಿಸಬಹುದು ಎಂದರು.

ಅಂದಿನ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಬಸವ ಮಾಚಿದೇವ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಮೈಸೂರು ಅರಗು ಮತ್ತು ಬಣ್ಣ ಕಾರ್ಖಾನೆ ಅಧ್ಯಕ್ಷ ರಘು ಕೌಟಿಲ್ಯ ಸಮಾರಂಭ ಉದ್ಘಾಟಿಸುವರು. ಮಡಿವಾಳ ಮಾಚಿದೇವರ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ್ ಹಳುವಾಡಿ ಅಧ್ಯಕ್ಷತೆ ವಹಿಸುವರು. ಮಂಡ್ಯ ಜಿಲ್ಲಾ ಜಗಜ್ಯೋತಿ ಬಸವೇಶ್ವರ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸೋಮಶೇಖರ್ ಪ್ರಾಸ್ತಾವಿಕ ನುಡಿ ನುಡಿಯುವರು ಎಂದರು.

ಕರ್ನಾಟಕ ರಾಜ್ಯ ಮಾಜಿದೇವ ಅಭಿವೃದ್ಧಿ ನಿಗಮ ಅಧ್ಯಕ್ಷ ರಾಜು ಎಂ.ತಲ್ಲೂರು ಹಾಗೂ ಮೈಸೂರು ಎ.ಡಿ.ಎಲ್.ಆರ್ ನ ಮಂಜುನಾಥ್ ಅವರಿಗೆ ಮಡಿವಾಳ ಮಾಚಿದೇವ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು. ಕವಿ ಗೊಲ್ಲಹಳ್ಳಿ ಶಿವಪ್ರಸಾದ್ ವಿಷಯ ಮಂಡನೆ ಮಾಡುವರು. ಮುಖ್ಯ ಅತಿಥಿಗಳಾಗಿ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘ ರಾಜ್ಯಾಧ್ಯಕ್ಷ ಬಿ.ಆರ್. ಪ್ರಕಾಶ್, ಸಮಾಜ ಸೇವಕ  ಕೆ.ಕೆ.ರಾಧಾಕೃಷ್ಣ, ಹಾಪ್ ಕಾಮ್ಸ್ ನಿರ್ದೇಶಕ ಹೊಸಹಳ್ಳಿ ಡಿ.ನಾಗೇಶ್ ಭಾಗವಹಿಸುವರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವೆಂಕಟೇಶ್ ಹಳುವಾಡಿ ವಹಿಸುವರು. ಮನ್ಮುಲ್ ನಿರ್ದೇಶಕ ಯು.ಸಿ.ಶಿವಕುಮಾರ್ ಬಹುಮಾನ ವಿತರಣೆ ಮಾಡುವರು. ಮುಖ್ಯ ಅತಿಥಿಗಳಾಗಿ ಇನ್ಸ್ ಪೆಕ್ಟೆರ್ ಮಂಜುನಾಥ್, ಜಿ.ಪಂ.ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ತಾ.ಪಂ.ಮಾಜಿ ಸದಸ್ಯ ಸಂತೋಷ್, ಉದ್ಯಮಿ ವೆಂಕಟೇಶ್, ಆರ್.ಎ.ಪಿ.ಸಿ.ಎಂ.ಎಸ್. ನಿರ್ದೇಶಕ ಬೇಲೂರು ಸೋಮಶೇಖರ್, ನಗರಸಭಾ ಸದಸ್ಯ ನಾಗೇಶ್ ಭಾಗಹಿಸುವರು ಎಂದರು.

ಗೋಷ್ಠಿಯಲ್ಲಿ ಮುಖಂಡರಾದ ಗೊರವಾಲೆ ಚಂದ್ರಶೇಖರ್, ಚಿಕ್ಕೋನ ಶೆಟ್ಟಿ, ಶಿವಲಿಂಗಶೆಟ್ಟಿ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ