ನಾಗಮಂಗಲ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿ.ಪಂ.ಸಿಇಓ ಶಾಂತಾ ಹುಲ್ಮನಿ ಕುಡಿಯುವ ನೀರಿನ ಘಟಕ, ಡಿಜಿಟಲ್ ಲೈಬ್ರರಿ, ರಸ್ತೆ ಕಾಮಗಾರಿ, ಅಂಗನವಾಡಿ ಕೇಂದ್ರಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ಮಾಡಿದರು.

ನಾಗಮಂಗಲ ತಾಲ್ಲೂಕಿನ ಕಾಂತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರನಗರ ಗ್ರಾಮದ ಜಲಜೀವನ್ ಕಾಮಗಾರಿ ಮತ್ತು ಕಾಂತಾಪುರ ಸರ್ಕಾರಿ ಪ್ರೌಢಶಾಲೆಯ ಆಟದ ಮೈದಾನ ಕಾಮಗಾರಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು, ಸರ್ವ ಸದಸ್ಯರು, ತಾಲ್ಲೂಕು ಪಂಚಾಯಿತಿ ತಾಂತ್ರಿಕ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.




