Thursday, September 19, 2024

ಪ್ರಾಯೋಗಿಕ ಆವೃತ್ತಿ

ಸೈಕ್ಲೋನ್ ಎಫೆಕ್ಟ್ : ಇನ್ನೂ ಮೂರು ದಿನ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಳೇ ಮೈಸೂರು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸುರಿಯುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ,ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ, ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಇಂದಿನಿಂದ ವ್ಯಾಪಕ ಮಳೆಯಾಗಲಿದೆ.

ನವೆಂಬರ್ ತಿಂಗಳು ಮುಗಿಯುತ್ತಾ ಬಂದರೂ ರಾಜ್ಯದಲ್ಲಿ ಇನ್ನೂ ಮಳೆಯ ಅಬ್ಬರ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಕಳೆದೊಂದು ವಾರದಿಂದ ರಾಜ್ಯದಾದ್ಯಂತ ಚಳಿ ಹೆಚ್ಚಾಗಿತ್ತು. ಆದರೆ, ಇಂದಿನಿಂದ ಮತ್ತೆ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆಯ ಬಳಿಕ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಸೋಮವಾರ ಕನಿಷ್ಠ 13.9 ಡಿಗ್ರಿ ಸೆಲ್ಸಿಯಸ್ ತಾಪಮಾನವಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂದಹಾಗೆ, ಈ ತಾಪಮಾನ ಕಳೆದ 1 ದಶಕದಲ್ಲಿ ನವೆಂಬರ್‌ನಲ್ಲಿ ದಾಖಲಾದ ಅತಿ ಕನಿಷ್ಟ ತಾಪಮಾನವಾಗಿದೆ. ನಿನ್ನೆ ಉದ್ಯಾನನಗರಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 13.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ಯಾವ ರಾಜ್ಯಗಳಲ್ಲಿ ಮಳೆ ?

ಇಂದು ಆಂಧ್ರಪ್ರದೇಶ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಚದುರಿದ ತುಂತುರು ಮತ್ತು ಗುಡುಗು ಸಹಿತ ಕೆಲವು ಭಾರಿ ಬೀಳುವ ಸಾಧ್ಯತೆಯಿದೆ. ತಮಿಳುನಾಡು, ಕರ್ನಾಟಕ, ಕೇರಳ, ತೆಲಂಗಾಣ ಮತ್ತು ಒಡಿಶಾದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!