Thursday, September 19, 2024

ಪ್ರಾಯೋಗಿಕ ಆವೃತ್ತಿ

ಕನಕದಾಸರ ಕೀರ್ತನೆ ಇಂದಿಗೂ ಪ್ರಸ್ತುತ : ರಾಮಚಂದ್ರ ಹಡಪದ

ಕನಕದಾಸರ ಕೀರ್ತನೆಗಳು ಇಂದಿಗೂ ಪ್ರಸ್ತುತ. ಕನಕದಾಸರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು. ಆಗ ಮಾತ್ರ ಅವರ ಜಯಂತಿಗೆ ಅರ್ಥ ಬರುತ್ತದೆ ಎಂದು ಸಂಗೀತ ನಿರ್ದೇಶಕ ರಾಮಚಂದ್ರ ಹಡಪದ ಹೇಳಿದರು.

ಮಂಡ್ಯ ಹೊರವಲಯದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕನಕದಾಸ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜ ಸುಧಾರಣೆಗೆ ಕನಕದಾಸರ ಕೊಡುಗೆ ಅಪಾರ. ಸಮ-ಸಮಾಜ ನಿರ್ಮಾಣಕ್ಕೆ ಕನಕದಾಸರು ಅಂದಿನ ಕಾಲದಲ್ಲೇ ಪಣತೊಟ್ಟಿದ್ದರು. ಅವರ ಕೀರ್ತನೆಗಳ ಮೂಲಕ ಅದನ್ನು ತಿಳಿಸುವ ಪ್ರಯತ್ನ ಮಾಡಿದರು. ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಅದನ್ನು ಅಳಿಸಿ ಹಾಕಲು ಯಾರಿಂದಲೂ ಸಾಧ್ಯವಿಲ್ಲ. ಮಾತೃಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮಂಡ್ಯ ಆಡಳಿತಾಧಿಕಾರಿ ಪ್ರೊ.ಹೆಚ್.ಎಂ.ಹೇಮಲತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಮಹಾನೀಯರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಸಾಧನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಪೋಷಕರು ಇಂಗ್ಲಿಷ್ ವ್ಯಾಮೋಹಕ್ಕೆ ಒಳಗಾಗಿ ತಮ್ಮ ಮಕ್ಕಳಿಗೆ ಕನ್ನಡ ಭಾಷೆಯನ್ನು ಕಲಿಸುವುದನ್ನೇ ಮರೆಯುತ್ತಿದ್ದಾರೆ. ಕನ್ನಡ ಭಾಷೆಗೆ ಪ್ರಾಧನ್ಯತೆ ನೀಡಬೇಕು. ಆಡಳಿತ ವ್ಯವಸ್ಥೆಯಲ್ಲಿ ಕನ್ನಡ ಭಾಷೆ ಕಡ್ಡಾಯವಾಗಬೇಕು. ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರಿಗೆ ಹೆಚ್ಚಿನ ಉದ್ಯೋಗ ಸಿಗುವಂತಾಗಬೇಕು ಎಂದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಬೋಧಕ ಬೋದಕೇತರ ಸಿಬ್ಬಂದಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!