Thursday, November 19, 2026

ಪ್ರಾಯೋಗಿಕ ಆವೃತ್ತಿ

ಉದ್ಯೋಗ ಮೇಳ ಸದುಪಯೋಗ ಪಡಿಸಿಕೊಳ್ಳಿ: ಕೆ.ಅನ್ನದಾನಿ

ಹಿಂದೆ ಉದ್ಯೋಗಕ್ಕಾಗಿ ಅಭ್ಯರ್ಥಿಗಳು ಅಲೆಯುವ ಸ್ಥಿತಿ ಇತ್ತು. ಆದರೆ ಇಂದು ಮನೆಬಾಗಿಲಿಗೆ ಉದ್ಯೋಗಾವಕಾಶಗಳು ಬರುತ್ತಿದ್ದು, ವಿದ್ಯಾರ್ಥಿಗಳು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಕೆ.ಅನ್ನದಾನಿ ಸಲಹೆ ನೀಡಿದರು.

ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜಿನಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಶಾಂತಿ ಪದವಿ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಅಡಿ ನಡೆದ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿರುದ್ಯೋಗವನ್ನು ನಿವಾರಿಸಬೇಕೆಂದು ಹಿನ್ನೆಲೆಯಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ, ಹಲವು ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದು,ವಿದ್ಯಾರ್ಥಿಗಳು ಇಷ್ಟಪಡುವ ಉದ್ಯೋಗವನ್ನು ಆಯ್ಕೆ ಮಾಡಿಕೊಂಡು ಜೀವನ ಕಟ್ಟಿಕೊಳ್ಳಬೇಕೆಂದು ಹೇಳಿದರು.

ಉತ್ತಮ ಜೀವನ ಸಾಗಿಸಲು ಉದ್ಯೋಗದ ಅವಶ್ಯವಿದೆ. ಪ್ರಚಾರದ ಕೊರತೆಯಿಂದಾಗಿ ಬೃಹತ್ ಉದ್ಯೋಗ ಮೇಳಕ್ಕೆ ಅಭ್ಯರ್ಥಿಗಳ ಕೊರತೆ ಉಂಟಾಗಿದೆ‌. ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು ಎಂದರು. ಶಾಂತಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಹೆಚ್. ಕೆಂಪಯ್ಯ, ಪ್ರಾಂಶುಪಾಲರಾದ ಡಾ.ಸಿ. ನಾಗರಾಜು, ಪುರಸಭೆ ಉಪಾಧ್ಯಕ್ಷ ಎಂ.ಟಿ. ಪ್ರಶಾಂತ್, ಶಾಂತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಿವಪ್ಪ, ಶಾಂತಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಪುಟ್ಟರಾಜು, ಜಿಲ್ಲಾ ಉದ್ಯೋಗಾಧಿಕಾರಿ ವೇಣುಗೋಪಾಲ್ ಸೇರಿದಂತೆ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ