Friday, November 20, 2026

ಪ್ರಾಯೋಗಿಕ ಆವೃತ್ತಿ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ: ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ರ ಸಂಬಂಧ ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲಕೃಷ್ಣ ಅವರು ಉಮ್ಮಡಹಳ್ಳಿ ಮತ್ತು ಬೇಳ್ಳುಂಡಗೆರೆ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಗ್ರಾಮಗಳ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಪರಿಶೀಲಿಸಿದರು.

ಮತದಾರರ ಪರಿಷ್ಕರಣೆ ಸಂಬಂಧ ಸ್ವೀಕೃತವಾಗಿರುವ ನಮೂನೆಗಳನ್ನು ಖುದ್ದು ಪರಿಶೀಲಿಸಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಯುವ ಮತದಾರರ ಸೇರ್ಪಡೆ, ಮರಣ ಮತ್ತು ಸ್ಥಳಾಂತರಗೊಂಡಿರುವ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲು ಕಟ್ಟುನಿಟ್ಟಾಗಿ ನಿಯಮಾನುಸಾರ ಕ್ರಮವಹಿಸಲು ಸೂಚಿಸಿದರು.

ನಂತರದಲ್ಲಿ ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವ ಪ್ರಗತಿಯನ್ನು ಪರಿಶೀಲನೆ ಮಾಡಿ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ತಹಶೀದ್ದಾರ್ ಗಳಾದ ಕುಂಇಅಹಮದ್, ನರಸಿಂಹಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ