Friday, September 20, 2024

ಪ್ರಾಯೋಗಿಕ ಆವೃತ್ತಿ

ಜೀವವಿರುವವರೆಗೂ ಜನರ ಕಷ್ಟ-ಸುಖದಲ್ಲಿ ಭಾಗಿಯಾಗುವೆ: ರಾಮಚಂದ್ರು

ನಾನೊಬ್ಬ ಬಡ ರೈತನ ಮಗನಾಗಿದ್ದು, ಶಂಭು ಸೇವಾ ಟ್ರಸ್ಟ್ ವತಿಯಿಂದ ನನ್ನ ಜೀವ ಇರುವವರೆಗೂ ಸಮಾಜ ಸೇವೆಯನ್ನು ಮುಂದುವರಿಸುತ್ತೇನೆ. ಜನರ ಕಷ್ಟ-ಸುಖಗಳಲ್ಲಿ ಸದಾ ಭಾಗಿಯಾಗುವ ನನ್ನನ್ನು ಆಶೀರ್ವದಿಸಿ, ಬೆಳೆಸಬೇಕೆಂದು ಮನ್ ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ಮನವಿ ಮಾಡಿದರು.

ಮಂಡ್ಯ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ಬೂದನೂರು ಗ್ರಾಮ ಪಂಚಾಯಿತಿ, ಕನ್ನಲಿ ಗ್ರಾಮ ಪಂಚಾಯಿತಿ, ಬಿ.ಗೌಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಾದ ಹೊಸಬೂದನೂರು, ಹಳೆ ಬೂದನೂರು, ಮಂಗಯ್ಯನಗರ, ಕಟ್ಟೆದೊಡ್ಡಿ, ಬಿ.ಗೌಡಗೆರೆ, ಹುಚ್ಚಲಗೆರೆ, ಕಾಗೆಹಳ್ಳದದೊಡ್ಡಿ, ಕನ್ನಲಿ
ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು.

ಮಲ್ಲಯ್ಯನದೊಡ್ಡಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಿ ಮಾತನಾಡಿದ ಅವರು, ಶಂಭು ಸೇವಾ ಟ್ರಸ್ಟ್ ಸಮಾಜಮುಖಿ ಕೆಲಸಗಳನ್ನು ಮಾಡುವುದೇ ಗುರಿಯಾಗಿಟ್ಟು ಕೊಂಡು ಕೆಲಸ ನಿರ್ವಹಿಸುತ್ತಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಸರ್ಕಾರ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡುತ್ತದೆ. ಎಲ್ಲಾ ಮಕ್ಕಳನ್ನು ಸಮಾನವಾಗಿ ಕಾಣುವ ದೃಷ್ಟಿಯಿಂದ ಮಂಡ್ಯ ತಾಲೂಕಿನ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಮಾಡುವ ಕೆಲಸ ಮಾಡುತ್ತಿದ್ದೇವೆ ಎಂದರು.

ಬದುಕನ್ನು ರೂಪಿಸಿಕೊಳ್ಳಲು ವಿದ್ಯಾಭ್ಯಾಸ ಬಹಳ ಮುಖ್ಯ. ಮಕ್ಕಳು ಗಮನವಿಟ್ಟು ಓದಿ ವಿದ್ಯಾವಂತ
ರಾಗಿ ಉನ್ನತ ಸ್ಥಾನ ಅಲಂಕರಿಸಬೇಕೆಂದು ಸಲಹೆ ನೀಡಿದರು.

ಶಂಭು ಧರ್ಮಯಾತ್ರೆ ನನ್ನ ತಾಯಿಯ ಕನಸಾಗಿದ್ದು, ತಾತ್ಕಾಲಿಕವಾಗಿ ಧರ್ಮ ಯಾತ್ರೆ ನಿಂತಿದೆ. ಯಾರೂ ಅನ್ಯತಾ ಭಾವಿಸಬಾರದು.ಮುಂದಿನ ದಿನಗಳಲ್ಲಿ ವರಿಷ್ಠರ ಜೊತೆ ಮಾತನಾಡಿ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಶಂಭು ಧರ್ಮ ಯಾತ್ರೆ ಮುಂದುವರಿಸುತ್ತೇನೆ ಎಂದರು.

ಜೆಡಿಎಸ್ ಮುಖಂಡರಾದ ಬೂದನೂರು ಸ್ವಾಮಿ, ಮನ್ ಮುಲ್ ಉಪಾಧ್ಯಕ್ಷ ಎಂ.ಎಸ್. ರಘುನಂದನ್, ಕನ್ನಲಿ ಗ್ರಾಮ ಪಂಚಾಯತಿ ಅಧ್ಯಕ್ಷ ವಿಜಯಕುಮಾರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕಿರಣ್ ಕುಮಾರ್, ಗ್ರಾಮ ಪಂಚಾಯತಿ ಸದಸ್ಯೆ ನಾಗಮ್ಮ, ಶಂಭು ಸೇವಾ ಟ್ರಸ್ಟ್ ಕಾರ್ಯದರ್ಶಿ ಬಿ.ಆರ್.ಸುರೇಶ್ ಸೇರಿದಂತೆ ಇತರರು ಹಾಜರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!