ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ,ಯುವ ನಾಯಕ ಇಂಡುವಾಳು ಎಸ್. ಸಚ್ಚಿದಾನಂದ ಇಂದು ಬೆಳಿಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾದರು.
ತಮ್ಮ ಸಹಸ್ರಾರು ಬೆಂಬಲಿಗರು,ಮುಖಂಡರು, ಹಿತೈಷಿಗಳೊಂದಿಗೆ ಇಂಡುವಾಳು ಎಸ್. ಸಚ್ಚಿದಾನಂದ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್ ಮತ್ತಿತರರು ಇಂಡುವಾಳು ಸಚ್ಚಿದಾನಂದ ಅವರಿಗೆ ಬಿಜೆಪಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಶಾಸಕರಾದ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ ಮತ್ತಿತರರಿದ್ದರು.

ಇಂಡುವಾಳು ಸಚ್ಚಿದಾನಂದ ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಿರುವ ಸಂದರ್ಭದಲ್ಲಿ ಮುಖಂಡರಾದ ಶೆಟ್ಟಿಹಳ್ಳಿ ಲಿಂಗರಾಜು, ಧನಂಜಯ್, ರಾಮಚಂದ್ರು, ಆತ್ಮಾನಂದ ಬಾಪು, ವೇಣುಗೋಪಾಲ್ ಮತ್ತಿತರರಿದ್ದರು.
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸುಮಾರು 1000ಕ್ಕೂ ಹೆಚ್ಚು ಬೆಂಬಲಿಗರು, ಹಿತೈಷಿಗಳು, ಅಭಿಮಾನಿಗಳು ಸುಮಾರು 20 ಕ್ಕೂ ಹೆಚ್ಚು ಬಸ್ಸುಗಳು, ಟಿಟಿ ವಾಹನಗಳು, ಕಾರುಗಳಲ್ಲಿ ತೆರಳಿದ್ದರು.
ಬಿಜೆಪಿ ಬಲವರ್ಧನೆ
2023ರ ಚುನಾವಣೆಯಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯ ಲಿರುವ ಸಚ್ಚಿದಾನಂದ ಕಳೆದ ಎರಡು ವರ್ಷಗಳಿಂದ ಬಿಜೆಪಿ ನಾಯಕರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದರು. ಆದರೆ ಅಧಿಕೃತವಾಗಿ ಬಿಜೆಪಿ ಸೇರಿರಲಿಲ್ಲ. ವಿಧಾನಸಭಾ ಚುನಾವಣೆಗೆ ಆರೇಳು ತಿಂಗಳು ಇರುವಾಗ ಸಚ್ಚಿದಾನಂದ ಇಂದು ತಮ್ಮ ಸಹಸ್ರಾರು ಬೆಂಬಲಿಗರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಸಚ್ಚಿದಾನಂದ ಸೇರ್ಪಡೆಯಿಂದ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಲವರ್ಧನೆ ಆಗಲಿದ್ದು, ತ್ರಿಕೋನ ಸ್ಪರ್ಧೆ ನಡೆಯಲಿದೆ.




