2023ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ.
ಮಾರ್ಚ್ 9, 2023 ರಿಂದ ಮಾ.29, 2023ರ ವರೆಗೆ ನಡೆಸಲು ಪಿಯು ಬೋರ್ಡ್ ತೀರ್ಮಾನಿಸಿದ್ದು, ಇಂದು (ನವೆಂಬರ್ 28) ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
2023ರ ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ಪರೀಕ್ಷೆ ನಡೆಯಲಿವೆ. #2ndPucExam2023 pic.twitter.com/y9OnR98UKD
— B.C Nagesh (@BCNagesh_bjp) November 28, 2022
“>
ಪರೀಕ್ಷಾ ದಿನಾಂಕ | ವಿಷಯ |
09-03-2023 | ಕನ್ನಡ, ಅರೇಬಿಕ್ |
11-03-2023 | ಗಣಿತ, ಶಿಕ್ಷಣ ಶಾಸ್ತ್ರ |
13-03-2023 | ಅರ್ಥಶಾಸ್ತ್ರ |
14-03-2023 | ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಾಸಾಯನಶಾಸ್ತ್ರ, ಮೂಲ ಗಣಿತ |
15-03-2023 | ತಮಿಳು, ತೆಲಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ |
16-03-2023 | ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ |
17-03-2023 | ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತಕೇರ್, ಬ್ಯೂಟಿ ಆಂಡ್ ವೆಲ್ನೆಸ್ |
18-03-2023 | ಭೂಗೋಳಶಾಸ್ತ್ರ, ಜೀವಶಾಸ್ತ್ರ |
20-03-2023 | ಇತಿಹಾಸ, ಭೌತಶಾಸತ್ರ |
21-03-2023 | ಹಿಂದಿ |
23-03-2023 | ಇಂಗ್ಲೀಷ್ |
25-03-2023 | ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ |
27-03-2023 | ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ಶಾಸ್ತ್ರ |
29-03-2023 | ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ |