Thursday, September 19, 2024

ಪ್ರಾಯೋಗಿಕ ಆವೃತ್ತಿ

ಯುವಜನತೆಗೆ ಕೌಶಲ್ಯ ತರಬೇತಿಗಳು ಅವಶ್ಯಕ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ವಿವಿಧ ಯೋಜನೆಯಡಿ ಜಿಲ್ಲೆಯ ಯುವಜನತೆಗೆ ಉದ್ಯೋಗಾಧಾರಿತ ಕೌಶಲ್ಯಾಭಿವೃದ್ದಿ ತರಬೇತಿ ನೀಡಲಾಗುತ್ತಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ:ಹೆಚ್.ಎನ್. ಗೋಪಾಲಕೃಷ್ಣ ತಿಳಿಸಿದರು.

ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಿ.ಎಂ.ಕೆ.ಕೆ.ವೈ.ತರಬೇತಿ ಯೋಜನೆ, ಡೇ-ನಲ್ಮ್ ಯೋಜನೆ, ಪಿ.ಎಂ.ಸ್ವನಿಧಿ ಯೋಜನೆ ಒಳಗೊಂಡತೆ ಹಲವಾರು ಯೋಜನೆಗಳಡಿ ಆರ್ಥಿಕ ಸ್ವಾವಲಂಬಿಗಳಾಗುವಂತೆ ಉತ್ತೇಜಿಸುವ ಹಲವಾರು ಕಾರ್ಯಕ್ರಮಗಳಿದ್ದು, ಅವುಗಳ ಪ್ರಗತಿ ಪರಿಶೀಲನೆ ನಡೆಸಿ ಯೋಜನೆಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇಂಗ್ಲೀಷ್ ಲ್ಯಾಬ್: ಆಂಗ್ಲ ಭಾಷೆಯನ್ನು ಸುಲಲಿತವಾಗಿ ಓದುವ, ಬರೆಯುವ, ಮಾತನಾಡುವ, ಮತ್ತು ಗ್ರಹಿಸುವ ಸಾಮರ್ಥ್ಯವನ್ನು ವೃದ್ಧಿಸಲು ಮಂಡ್ಯ ವಿಶ್ವವಿದ್ಯಾಲಯದಲ್ಲಿ ಇಂಗ್ಲೀಷ್ ಲ್ಯಾಬ್ ಸಜ್ಜುಗೊಂಡಿದೆ. ಇದೇ ರೀತಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಪ್ರಾರಂಭಿಸಲು ಸಿದ್ಧತೆ ನಡೆಸಿ ಎಂದರು.

ಸ್ಕಿಲ್‌ ಕನೆಕ್ಟ್ ಪೊರ್ಟಾಲ್: ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು ನೈಜ ಸಮಯ ನಿಗದಿಪಡಿಸಿ ಕೊಂಡು ವರ್ಚುಯಲ್ ಪ್ಲಾಟ್ ಫಾರ್ಮ್ ನಲ್ಲಿ ಭೇಟಿ ಮಾಡುತ್ತಾರೆ. ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಕಾಲೇಜು‌‌ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಅವರಿಗೆ ಉದ್ಯೋಗ ಗಳಿಸಲು ಬೇಕಿರುವ ಕೌಶಲ್ಯಗಳ ತರಬೇತಿ ನೀಡಿ ಎಂದರು.

ಜಿಲ್ಲಾ ಕೌಶಲ್ಯ ಮಿಷನ್ ಯೋಜನೆಯಡಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ 8 ಉಪಸಮಿತಿಗಳಿವೆ. ಸಮಿತಿಗಳು ಪ್ರತಿ ತಿಂಗಳು ಸಭೆಯನ್ನು ನಡೆಸಿ ಇಲಾಖೆಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು, ಮಿಮ್ಸ್ ನಿರ್ದೇಶಕ ಡಾ.ಮಹೇಂದ್ರ, ಡಿ.ಡಿ.ಪಿ.ಐ.ಎಸ್.ಟಿ.ಜವರೇಗೌಡ, ನಗರಸಭೆ ಆಯುಕ್ತರಾದ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ನಾಗರಾಜು, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಡಿ.ಮಂಜುನಾಥ್, ಲೀಡ್ ಬ್ಯಾಂಕ್ ಮ್ಯಾನೇಜರ್ ದೀಪಕ್, ಕೌಶಲ್ಯಾಭಿವೃದ್ಧಿ ಅಧಿಕಾರಿ ವೇಣುಗೋಪಾಲ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಬಿ.ರಂಗೇಗೌಡ, ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಶ್ರೀನಿವಾಸ್, ಕಾರ್ಮಿಕ ಇಲಾಖೆಯ ಅಧಿಕಾರಿ ಮಂಜುಳ, ಆರ್ ಸೆಟಿ ನಿರ್ದೇಶಕರಾದ ವಿವೇಕ್, ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಆರ್.ದಶರಥ, ಡಾ.ಕೆ.ಜಿ ಭವಾನಿ ಶಂಕರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾ.ವಿ.ಎಸ್.ಅಶೋಕ್, ಆರ್.ಟಿ.ಒ.ಅಧಿಕಾರಿ ವಿವೇಕಾನಂದ ಸೇರಿದಂತೆ ಇನ್ನಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!