Thursday, September 19, 2024

ಪ್ರಾಯೋಗಿಕ ಆವೃತ್ತಿ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಆದೇಶಕ್ಕೆ ಹೈಕೋರ್ಟ್‌ ತಡೆ

ರಾಜ್ಯದ 13,363 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ತಾತ್ಕಾಲಿಕ ಆಯ್ಕೆಪಟ್ಟಿಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

1:2 ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗುವ ಅರ್ಹತೆ ಇದ್ದರೂ ಮೀಸಲಾತಿ ಗೊಂದಲದಿಂದ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಹೆಸರು ಪ್ರಕಟವಾಗದ ಉಡುಪಿಯ ಯಡತಾಡಿ ಗ್ರಾಮದ ಅನಿತಾ ಸೇರಿ 40 ಮಂದಿ ಅಭ್ಯರ್ಥಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2022ರ ನ.18ರಂದು ಹೊರಡಿಸಿದ್ದ ತಾತ್ಕಾಲಿಕ ಪಟ್ಟಿಗೆ ಡಿ.9ರವರೆಗೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ನೀಡಿದೆ.

ತಕರಾರು ಏಕೆ?

ತಕರಾರು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಹಿಂದೆ 1:2 ಅನುಪಾತದ ತಾತ್ಕಾಲಿಕ ಪಟ್ಟಿಯಲ್ಲಿ ದಾಖಲೆಗಳ ಪರಿಶೀಲನೆಗೆ ಅರ್ಹರಾಗಿದ್ದರು. ಆದರೆ, ಮೀಸಲಾತಿ ಅರ್ಹತೆಯ ದಾಖಲೆಗಳನ್ನು ಪರಿಶೀಲಿಸಿದ್ದ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. 2022ರ ನ.18ರಂದು 1:1 ತಾತ್ಕಾಲಿಕ ಆಯ್ಕೆ ಪಟ್ಟಿಪ್ರಕಟಿಸಿದ್ದು, ಅರ್ಜಿದಾರರು ಅದರಲ್ಲಿ ಸ್ಥಾನ ಪಡೆದಿರಲಿಲ್ಲ. ಇದರಿಂದ ಅರ್ಜಿದಾರರು ತಾತ್ಕಾಲಿಕ ಪಟ್ಟಿಯನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲು ಏರಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!