Saturday, November 21, 2026

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಗೋವಾದಲ್ಲಿ ಗೋಹತ್ಯೆ ನಿಷೇಧಿಸಿಲ್ಲವೇಕೆ? : ಸಿಎಂ ಇಬ್ರಾಹಿಂ

ಗೋವನ್ನು ಅವ್ವ, ಮಾತೆ ಎನ್ನುವ ಬಿಜೆಪಿ, ತನ್ನದೇ ಆಡಳಿತವಿರುವ ಗೋವಾದಲ್ಲಿ ಗೋಹತ್ಯೆಯನ್ನು ನಿಷೇಧಿಸಿಲ್ಲ. ಅಲ್ಲಿ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೊಳಿಸಿಲ್ಲ. ಗೋವಾದ ಗೋವು ಬಿಜೆಪಿಯವರಿಗೆ ಮಾತೆಯಲ್ಲವೇ ಎಂದು ಜೆಡಿಎಸ್‌ ಅಧ್ಯಕ್ಷ ಸಿ.ಎಂ ಇಬ್ರಾಹಿಂ ಲೇವಡಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗೋವಾ ಬಿಜೆಪಿ ಸರ್ಕಾರ ಅಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡುವುದಿಲ್ಲ. ಒಂದು ವೇಳೆ ಮಾಡಿದರೆ, ಅಲ್ಲಿನ ಕ್ರೈಸ್ತರು ಇವರಿಗೆ ಹೊಡೆಯುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಗೋವಾದಿಂದ ದನದ ಮಾಂಸ ರಾಜ್ಯಕ್ಕೆ ಬರುತ್ತಿದೆ. ಅದನ್ನೂ ಬಿಜೆಪಿ ಸರ್ಕಾರ ತಡೆಯುತ್ತಿಲ್ಲ. ಮುಂದಿನ ಚುನಾವಣೆಯಲ್ಲಿ ಸೋಲುವ ಭಯದಿಂದ ರಾಜ್ಯದಲ್ಲಿ ಗೋಹತ್ಯೆ, ಮುಸ್ಲಿಂ ವ್ಯಾಪಾರಿಗಳ ನಿರ್ಬಂಧದಂತ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ. ಮತ ದೃವೀಕರಣಕ್ಕೆ ಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದರು. 

“ಜೆಡಿಎಸ್ ಅಧಿಕಾರಕ್ಕೆ ಬಂದರೆ ಎಚ್.ಡಿ ಕುಮಾರಸ್ವಾಮಿಯೇ ಮುಖ್ಯಮಂತ್ರಿಯಾಗುತ್ತಾರೆ. ಅವರು ಪ್ರಧಾನಮಂತ್ರಿ ಹುದ್ದೆಗೇರಿದಾಗ ಮಾತ್ರ ಇಲ್ಲಿ ಮುಖ್ಯಮಂತ್ರಿ ಯಾರಾಗಬೇಕೆಂಬ ಪ್ರಶ್ನೆ ಉದ್ಭವಿಸುತ್ತದೆ” ಎಂದು ಸ್ಪಷ್ಟಪಡಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ