Thursday, September 19, 2024

ಪ್ರಾಯೋಗಿಕ ಆವೃತ್ತಿ

ಹನುಮ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ : ಬಿಗಿ ಬಂದೋಬಸ್ತ್

ಶ್ರೀರಂಗಪಟ್ಟಣದಲ್ಲಿ ನಾಳೆ ಹನುಮ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ನಡೆಯಲಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಬಿಗಿ ಭದ್ರತೆ ಕಲ್ಪಿಸಿದ್ದು, ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಹದ್ದಿನ ಕಣ್ಣಿಟ್ಟಿದ್ದಾರೆ.

ಪೋಲಿಸ್ ಬಂದೋಬಸ್ತ್

ಹಿಂದೂ ಜಾಗರಣ ವೇದಿಕೆ ಹಾಗೂ ಸಂಘ ಪರಿವಾರದ ಸಂಘಟನೆಗಳು ಹನುಮ ಮಾಲಧಾರಿಗಳ ಸಂಕೀರ್ತನಾ ಯಾತ್ರೆ ನಾಳೆ ದೊಡ್ಡ ಮಟ್ಟದಲ್ಲಿ ನಡೆಯಲಿದ್ದು, ಸುಮಾರು 10 ಸಾವಿರಕ್ಕೂ ಹೆಚ್ಚು ಹನುಮ ಮಾಲಾಧಾರಿಗಳು ಪಾಲ್ಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ಸಂಕೀರ್ತನಾ ಯಾತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಹನುಮ ಮಾಲಾಧಾರಿಗಳು ದೊಡ್ಡ ಸಂಖ್ಯೆಯಲ್ಲಿ ಶ್ರೀರಂಗಪಟ್ಟಣಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ ಪಟ್ಟಣದ ಜಾಮಿಯಾ ಮಸೀದಿ ಸುತ್ತಲೂ ಪೊಲೀಸರ ಪಹರೆ ಹಾಕಲಾಗಿದೆ. ಜಾಮಿಯಾ ಮಸೀದಿಯ ಸುತ್ತ ಯಾರು ಪ್ರವೇಶಿಸಿದಂತೆ ಬ್ಯಾರಿಕೇಡ್ ಗಳನ್ನು ಹಾಕಲಾಗಿದೆ.

ಶ್ರೀರಂಗಪಟ್ಟಣದಲ್ಲಿರುವ ವಿದ್ಯುತ್ ಕಂಬಗಳಿಗೆ ಸಿಸಿಟಿವಿ ಆಡಿಸಲಾಗಿದೆ. ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್ ಮೂಲಕ ಪರಿಶೀಲನೆ ಮಾಡಲಾಗಿದೆ. ಕೇಸರಿಮಯ ಪಟ್ಟಣದಲ್ಲಿ ಎಲ್ಲಿ ನೋಡಿದರೂ ಕೇಸರಿ ಬಾವುಟ, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳು ಕಾಣುತ್ತಿದ್ದು, ಸಂಪೂರ್ಣ ಕೇಸರಿಮಯವಾಗಿದೆ.

ಹನುಮ ಮಾಲಾಧಾರಿಗಳು ಹಾಗೂ ಸಂಘ ಪರಿವಾರದ ಮುಖಂಡರು ಸಂಕೀರ್ತನಾ ಯಾತ್ರೆ ಯಶಸ್ವಿಗೊಳಿಸಲು ಸಿದ್ಧರಾಗಿ ಜಿಲ್ಲೆಯ ಪ್ರತಿ ತಾಲೂಕಿನಿಂದಲೂ ಸಾವಿರಾರು ಸಂಖ್ಯೆಯಲ್ಲಿ ಹನುಮ ಮಾಲಾಧಾರಿಗಳನ್ನು ಕರೆ ತರಲು ಸಿದ್ಧತೆ ಮಾಡಲಾಗಿದೆ. ಚುನಾವಣೆ ವರ್ಷವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕೇಸರಿ ಬಾವುಟ, ಕೇಸರಿ ಬಂಟಿಂಗ್ಸ್ ಗಳು ರಾರಾಜಿಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಕರಿಗೆ ಮಾಲಾಧಾರಣೆ ಮಾಡಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!