ಜಾಮಿಯಾ ಮಸೀದಿ ಇರುವ ಜಾಗದಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನ ಕಟ್ಟುವುದೇ ನಮ್ಮ ಸಂಕಲ್ಪ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಘೋಷಿಸಿದರು.
ಶ್ರೀರಂಗಪಟ್ಟಣದಲ್ಲಿ ಟಿಪ್ಪು ಸುಲ್ತಾನ್ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನ ಕೆಡವಿ ಜಾಮೀಯಾ ಮಸೀದಿ ನಿರ್ಮಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾನೆ. ಅದಕ್ಕಾಗಿ ಸಂಕೀರ್ತನಾ ಯಾತ್ರೆ ಮಂದಿರ ಮತ್ತೆ ಕಟ್ಟುವ ಸಂಕಲ್ಪದೊಂದಿಗೆ ನಡೆಯುತ್ತಿದೆ. ಇಂದಲ್ಲ ,ನಾಳೆ ಮಸೀದಿ ಜಾಗದಲ್ಲಿ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಸರ್ಧಾಕಾಂಕ್ಷಿಗಳಾದ ಇಂಡುವಾಳು ಸಚ್ಚಿದಾನಂದ, ಅಶೋಕ್ ಜಯರಾಂ, ಫೈಟರ್ ರವಿ, ಕೆ.ಎಸ್.ನಂಜುಂಡೇಗೌಡ, ಇಂದ್ರೇಶ್, ಬಿಜೆಪಿ ತಾಲೂಕು ಅಧ್ಯಕ್ಷ ಪೀಹಳ್ಳಿ ರಮೇಶ್ ಸೇರಿದಂತೆ ಹಲವರಿದ್ದರು.




