ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಂಡ್ಯ ಜಿಲ್ಲಾ ಶಾಖೆ ವತಿಯಿಂದ ಡಿ.8ರಂದು ಸಂಜೆ 4.30 ಗಂಟೆಗೆ ಪತ್ರಿಕಾ ದಿನಾಚರಣೆ-2022 ಕ್ಷೇಮನಿಧಿಗೆ ವಂತಿಕೆ ನೀಡಿರುವ ಜನಪ್ರತಿನಿಧಿಗಳು ಹಾಗೂ ಹಿರಿಯ ಪತ್ರಕರ್ತರಿಗೆ ಅಭಿನಂದನೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಂಡ್ಯ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ಸಿ.ಮಂಜುನಾಥ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮನಂದನಾಥ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸುವರು. ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹಾಗೂ ರೇಷ್ಮೆ ಸಚಿವ ಕೆ.ಸಿ.ನಾರಾಯಣಗೌಡ ಅವರನ್ನು ಅಭಿನಂದಿಸಲಾಗುವುದು ಎಂದರು.
ಶಾಸಕ ಸಿ.ಎಸ್.ಪುಟ್ಟರಾಜು ಸಮಾರಂಭ ಉದ್ಘಾಟಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವರಾದ ಎನ್. ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ ಅಭಿನಂದಿಸುವರು. ಶಾಸಕ ರವೀಂದ್ರಶ್ರೀಕಂಠಯ್ಯ, ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ, ಮನ್ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಮತ್ತೀಕೆರೆ ಜಯರಾಂ ಆಶಯ ನುಡಿ ನುಡಿಯುವರು. ಜಿಲ್ಲಾ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ.ಸಿ.ಮಂಜುನಾಥ್ ಪ್ರಾಸ್ತಾವಿಕ ನುಡಿ ನುಡಿಯುವರು.
ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಕೋಲೋರೆಕ್ಟಲ್ ಸರ್ಜನ್ ಡಾ.ಸಿ.ಎಂ.ಪರಮೇಶ್, ಕಾಂಗ್ರೆಸ್ ಮುಖಂಡರಾದ ಕೆ.ಕೆ.ರಾಧಾಕೃಷ್ಣ, ಸಿದ್ದಾರೂಢ ಸತೀಶ್ ಗೌಡ, ನಗರಸಭೆ ಅಧ್ಯಕ್ಷ ಹೆಚ್.ಎಸ್.ಮಂಜು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಹೆಚ್.ನಿರ್ಮಲ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸುವರು ಎಂದರು.
ಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎನ್.ನವೀನ್ ಕುಮಾರ್, ಪದಾಧಿಕಾರಿಗಳಾದ ನಂಜುಂಡಸ್ವಾಮಿ, ಆನಂದ್, ಬಿ.ಪಿ.ಪ್ರಕಾಶ್, ಕೆರಗೋಡು ಸೋಮಶೇಖರ್ ಮತ್ತಿತರರಿದ್ದರು.




