ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಂಡ್ಯ ತಾಲ್ಲೂಕಿನ ಮೆಟ್ರಿಕ್ ನಂತರ (ಸ್ನಾತಕೋತರ ಹಾಗೂ ವೃತ್ತಿಪರ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಪ.ಜಾ., ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ 2022-23ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ಡಿಸೆಂಬರ್.19 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂ.08232-228688 ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಕಲ್ಯಾಣಧಿಕಾರಿ ಪ್ರಕಟಣೆ ತಿಳಿಸಿದೆ.