Thursday, September 19, 2024

ಪ್ರಾಯೋಗಿಕ ಆವೃತ್ತಿ

ಜಾನಪದ ಮುಂದಿನ ಪೀಳಿಗೆಗೆ ತಲುಪಲಿ : ದೊಡ್ಡಯ್ಯ

ಜನಪದ ಕಲಾವಿದರು ನಮ್ಮ ಕಲಾ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೆ ತಿಳಿಸಿ ಅದನ್ನು ಬೆಳೆಸುವ ಮಹತ್ವದ ಕಾರ್ಯ ನಡೆಸುತ್ತಿರುವುದು ಶ್ಲಾಘನೀಯ ಎಂದು ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ ಎಂದು ಹೇಳಿದರು.

ಮಂಡ್ಯದಲ್ಲಿ ಡಿ.9 ಮತ್ತು 10ರಂದು ನಡೆಯುವ ಅಖಿಲ ಕರ್ನಾಟಕ ಜಾನಪದ ಸಮ್ಮೇಳನದ “ಜಾನಪದ ತೇರು” ವನ್ನು ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಪದಾಧಿಕಾರಿಗಳೊಂದಿಗೆ ಮಳವಳ್ಳಿ ಪಟ್ಟಣದ ಅನಂತ್ ರಾಂ ಸರ್ಕಲ್ ಬಳಿ ಸ್ವಾಗತಿಸಿ ಅವರು ಮಾತನಾಡಿದರು.

ಜನಪದ ಕಲಾವಿದರ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ ನೀಡಿ ಕಲಾ ಸಂಪತ್ತನ್ನು ಗೌರವಿಸುವ ಕಾರ್ಯ ನಡೆಸಬೇಕಾದ ಅಗತ್ಯವಿದೆ. ಅದರ ನಡುವೆ ನಮ್ಮ ಜಿಲ್ಲೆಯಲ್ಲಿ ಅಖಿಲ ಕರ್ನಾಟಕ ಜಾನಪದ ಸಮ್ಮೇಳನ ನಡೆಯುತ್ತಿರುವುದು ಸಂತಸ ತಂದಿದೆ ಎಂದರು.

ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಬಸಪ್ಪ ನೆಲಮಾಕನಹಳ್ಳಿ ಮಾತನಾಡಿ, ಜಿಲ್ಲೆಯಲ್ಲಿ ನಡೆಯುತ್ತಿರುವ ಜಾನಪದ ಸಮ್ಮೇಳನದಲ್ಲಿ ಕಲಾವಿದರ ಕಲಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ ನೀಡಿದಂತಾಗುತ್ತದೆ. ಆಧುನಿಕತೆಯ ಪ್ರಭಾವದಿಂದ ನಮ್ಮ ಶ್ರೀಮಂತ ಜಾನಪದ ಕಲೆಗಳು ಕ್ಷೀಣಿಸುತ್ತಿರುವ ಸಂದರ್ಭದಲ್ಲಿ ನಮ್ಮ ಜತೆ ಬದುಕುತ್ತಿರುವ ಕಲಾವಿದರನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಟಿ.ನಂದಕುಮಾರ್, ಕರ್ನಾಟಕ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ  ಅಧ್ಯಕ್ಷ ಎಂ.ಪುಟ್ಟಮಾಧು, ಪುರಸಭೆ ಸದಸ್ಯ ಸಿದ್ದರಾಜು, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಚೇತನ್ ಕುಮಾರ್, ಜಿ.ಪಂ.ಮಾಜಿ ಸದಸ್ಯ ಎಂ.ಎನ್.ಜಯರಾಜು, ಮುಖಂಡರಾದ ಬೋರೇಗೌಡ, ಚಂದ್ರಹಾಸ್, ಪರಮೇಶ್ವರಪ್ಪ, ರಮೇಶ್, ಪ್ರಸಾದ್, ಶಿವಣ್ಣ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!