Thursday, September 19, 2024

ಪ್ರಾಯೋಗಿಕ ಆವೃತ್ತಿ

ಫಲಿತಾಂಶ ಬಿಡುಗಡೆ, ವಿದ್ಯಾರ್ಥಿ ವೇತನ ಹಾಗೂ ಹಾಸ್ಟೆಲ್ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

NEP-2020 ಬ್ಯಾಚ್ ನ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ವಿದ್ಯಾರ್ಥಿ ವೇತನ ಹಾಗೂ ಹಾಸ್ಟೆಲ್ ಗಳ ಸಂಖ್ಯೆ ಹೆಚ್ಚಿಸಲು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆ ಉದ್ದೇಶಿಸಿ ಜಿಲ್ಲಾ ಸಂಚಾಲಕಿ ಚಂದ್ರಕಲಾ ಮಾತನಾಡಿ, ಈಗಾಗಲೇ ರಾಜ್ಯದಲ್ಲಿ NEP ಮೊದಲ ಬ್ಯಾಚ್ ನ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತಲುಪಿದ್ದಾರೆ. ಆದರೂ ಸಹ ಅವರ ಮೊದಲ ವರ್ಷದ ಫಲಿತಾಂಶ ಬಿಡುಗಡೆಯಾಗಿಲ್ಲ. ಹಾಗಾಗಿ, ಈ ಕೂಡಲೇ NEP -20 ಬ್ಯಾಚ್ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

nudikarnataka.com

ಹಾಗೆಯೇ ವಿದ್ಯಾರ್ಥಿವೇತನ ವಿತರಣೆ ಆಗದಿರುವುದು ವಿದ್ಯಾರ್ಥಿಗಳಲ್ಲಿ ಬಹಳ ಆತಂಕ ಮೂಡಿಸಿದೆ. ನೂರಾರು ಬಡ ಕುಟುಂಬದ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಪೂರೈಕೆಗಾಗಿ ವಿದ್ಯಾರ್ಥಿ ವೇತನದ ಮೇಲೆ ಅವಲಂಬಿ ತರಾಗಿರುತ್ತಾರೆ. ವಿದ್ಯಾರ್ಥಿವೇತನ ಸಿಗದಿದ್ದರೆ, ಅವರಲ್ಲಿ ಬಹುಪಾಲು ಜನ ಶಿಕ್ಷಣವನ್ನು ಪೂರೈಸುವುದೆ ಕಷ್ಟಕರವಾಗುತ್ತದೆ. ಈ ಕೂಡಲೇ ಪದವಿ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ವಿದ್ಯಾರ್ಥಿವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಅಲ್ಲದೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ರಾಜ್ಯದಲ್ಲಿ ಹಾಸ್ಟೆಲ್ ಸಂಖ್ಯೆ ಹೆಚ್ಚಿಸಬೇಕು. ಹಾಸ್ಟೆಲ್ ಹಾಗೂ ವಿದ್ಯಾರ್ಥಿ ವೇತನ ನೀಡದಿದ್ದರೆ ಕಾಲೇಜು ತೊರೆಯುವ ವಿದ್ಯಾರ್ಥಿಗಳು ಸಂಖ್ಯೆ ಹೆಚ್ಚಾಗುತ್ತದೆ. ಸರ್ಕಾರ ಈ ಬಗ್ಗೆ ಕಾಳಜಿ ವಹಿಸಬೇಕು. ಇಲ್ಲದಿದ್ದರೆ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗ ಬೇಕಾಗುತ್ತದೆ. ಸರ್ಕಾರ ಏಳು ಕಡೆ ನೂತನ ವಿವಿ ಸ್ಥಾಪನೆ ಮುಂದಾಗಿದೆ. ಮಂಡ್ಯ ಜಿಲ್ಲೆಯ ವಿವಿ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಖಾತ್ರಿ ಪಡಿಸಬೇಕು ಎಂದು ತಿಳಿಸಿದರು.

ಸೆಕ್ರೆಟರಿಯಟ್ ಸದಸ್ಯರಾದ ಸ್ವಾತಿ ಮಾತನಾಡಿ, ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮೂಲಭೂತ ಅವಶ್ಯಕತೆಯಾಗಿದೆ. ಆದರೆ ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಇಲ್ಲ. ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆಗಳನ್ನು ಹೆಚ್ಚಿಸಬೇಕು ಮತ್ತು ದಾಖಲಾತಿಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ನಂತರ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಮಂಡ್ಯ ವಿಶ್ವವಿದ್ಯಾನಿಲಯದ ತಿಮ್ಮೆಗೌಡ, ನಿರಂಜನ್, ಹೇಮಂತ್, ಲೋಕೇಶ, ಪ್ರಶಾಂತ್, ಹನಮಂತ ಮುಂತಾದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!