Thursday, September 19, 2024

ಪ್ರಾಯೋಗಿಕ ಆವೃತ್ತಿ

ಅನುಭವ ಚಿತ್ರದ ನಟಿ ”ಅಭಿನಯ”ಗೆ 2 ವರ್ಷ ಜೈಲು

ಪ್ರಸಿದ್ದ ನಿರ್ದೇಶಕ ಕಾಶೀನಾಥ್ ನಿರ್ದೇಶನದ ‘ಅನುಭವ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದಿದ್ದ ಚಿತ್ರ ನಟಿ ಅಭಿನಯ ಈಗ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಅತ್ತಿಗೆಗೆ ವರದಕ್ಷಿಣಿ ಕಿರುಕುಳ ನೀಡಿದ್ದಕ್ಕಾಗಿ ಹಾಗೂ ಕೌಟುಂಬಿಕ ದೌರ್ಜನ್ಯ ನಡೆಸಿದ್ದಕ್ಕಾಗಿ ಹೈಕೋರ್ಟ್ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಅಭಿನಯ ಅವರ ತಾಯಿ ಜಯಮ್ಮಗೆ 5 ವರ್ಷ ಜೈಲು ಶಿಕ್ಷೆ ನೀಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಅಭಿನಯ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ವರದಕ್ಷಿಣೆ ಕಿರುಕುಳದ ದೂರು ನೀಡಿದ್ದರು. ಬೆಂಗಳೂರಿನ ಚಂದ್ರಾ ಲೇಔಟ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ವರದಕ್ಷಿಣೆ ಕಿರುಕುಳ ಆರೋಪದ ಅಡಿಯಲ್ಲಿ ಅಭಿನಯ ಅವರ ಸಹೋದರ ಚೆಲುವರಾಜ್​ಗೆ 2 ವರ್ಷ ಶಿಕ್ಷೆ ನೀಡಲಾಗಿದೆ.

ಚೊಚ್ಚಲ ಸಿನಿಮಾ ‘ಅನುಭವ’ ಮೂಲಕ ಅಭಿನಯ ಹೆಚ್ಚು ಗುರುತಿಸಿಕೊಂಡರು. ಆದರೆ ನಂತರ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಗಲಿಲ್ಲ. ಹಲವಾರು ಧಾರಾವಾಹಿಗಳಲ್ಲಿ ನಟಿಸಿ ಅವರು ಮನೆಮಾತಾದರು. ಈಗಲೂ ಅವರು ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ. ಅಷ್ಟರಲ್ಲೇ ಜೈಲು ಶಿಕ್ಷೆ ಅನುಭವಿಸುವಂತಾಗಿದೆ.

2002ರಲ್ಲಿ ಕೇಸು ದಾಖಲು 

ಅಭಿನಯ ಅವರ ಅತ್ತಿಗೆ ಲಕ್ಷ್ಮಿದೇವಿ ಅವರು 2002ರಲ್ಲಿಯೇ ಈ ಕೇಸ್​ ದಾಖಲಿಸಿದ್ದರು. 1998ರಲ್ಲಿ ಅಭಿನಯ ಅವರ ಸಹೋದರ ಶ್ರೀನಿವಾಸ್​ ಜೊತೆ ಲಕ್ಷ್ಮಿದೇವಿ ವಿವಾಹ ನಡೆದಿತ್ತು. ಮದುವೆ ಬಳಿಕ ಶ್ರೀನಿವಾಸ್​ ಕುಟುಂಬದವರು ವರದಕ್ಷಿಣಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಚಂದ್ರಾ ಲೇಔಟ್​ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

‘ಹೆರಿಗೆ ಬಳಿಕ ಪತಿ ಮನೆಯವರು ನನ್ನನ್ನು ಸೇರಿಸಿಕೊಳ್ಳಲಿಲ್ಲ. ಪೋಷಕರ ಮನೆಯಲ್ಲಿ ಉಳಿದುಕೊಳ್ಳುವಂತೆ ನನ್ನ ಮೇಲೆ ಒತ್ತಡ ಹೇರಿದರು. ಕೊಲೆ ಬೆದರಿಕೆಯನ್ನೂ ಹಾಕಿದರು’ ಎಂದು ದೂರಿನಲ್ಲಿ ಲಕ್ಷ್ಮಿದೇವಿ ತಿಳಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!