ಕರ್ನಾಟಕ ರಾಜ್ಯ ವಕೀಲರ ಪರಿಷತ್ ನೂತನ ಅಧ್ಯಕ್ಷರಾಗಿ ಮಂಡ್ಯದ ವಕೀಲ ವಿಶಾಲ್ ರಘು ಆಯ್ಕೆಯಾಗಿದ್ದಾರೆ.
ಮಂಡ್ಯ ಮೂಲದ ವಕೀಲ ವಿಶಾಲ್ ರಘು ಅವರು ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯರಾಗಿ 2018 ರಲ್ಲಿ ಆಯ್ಕೆ ಆಗಿದ್ದರು.
ಸಂಘಟನೆಯಲ್ಲಿ ಸಕ್ರಿಯರಾಗಿ ಕಾರ್ಯ ನಿರ್ವಹಿಸಿದ ವಿಶಾಲ್ ರಘು ಅವರಿಗೆ ಅಧ್ಯಕ್ಷ ಸ್ಥಾನ ದೊರೆತಿರುವುದು ಮಂಡ್ಯ ಜಿಲ್ಲೆಗೆ ಹೆಮ್ಮೆಯ ಗರಿ ಮೂಡಿಸಿದೆ.




