Thursday, September 19, 2024

ಪ್ರಾಯೋಗಿಕ ಆವೃತ್ತಿ

ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಪರಿಶ್ರಮ ಅಗತ್ಯ : ವಿಜಯಣ್ಣ

ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಪರಿಶ್ರಮ ಓದಿನೊಂದಿಗೆ ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾಗುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಸಿಗುವ ಅವಕಾಶಗಳನ್ನು ತಮ್ಮದಾಗಿಸಿಕೊಳ್ಳಬೇಕೆಂದು ತಹಶೀಲ್ದಾರ್ ವಿಜಯಣ್ಣ ತಿಳಿಸಿದರು.

ಮಳವಳ್ಳಿ ಪಟ್ಟಣದ ಅನಿತ ಕಾನ್ವೆಂಟ್‌ನಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು ಮತ್ತು ಸಮಯ ಪಾಲನೆ ಮಾಡಿದರೇ ಯಶಸ್ಸು ಸಾಧಿಸಬಹುದಾಗಿದೆ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಶಿಕ್ಷಕರು ಮತ್ತು ಪೋಷಕರು ಪ್ರೋತ್ಸಾಹಿಸಿದರೇ ಮುಂದಿನ ದಿನಗಳಲ್ಲಿ ಉತ್ತಮ ಸಾಧನೆ ಮಾಡುವಲ್ಲಿ ಯಾವುದೇ ಸಂಶಯವಿಲ್ಲ ಎಂದರು

ಇತ್ತಿಚಿನ ದಿನಗಳಲ್ಲಿ ಅಹಿತಕರ ಘಟನೆಗಳು ಹೆಚ್ಚಾಗಿ ನಡೆಯುತ್ತಿರುದರಿಂದ ವಿದ್ಯಾರ್ಥಿಗಳು ಓದಿನ ಜೊತೆಗೆ ತಮ್ಮ ಜೀವ ರಕ್ಷಣೆ ಮಾಡುಕೊಳ್ಳುವುದನ್ನು ಕಲಿಯಬೇಕು. ಶಿಕ್ಷಕರು ವಿದ್ಯಾರ್ಥಿಗಳ ಬಗ್ಗೆ ಎಚ್ಚರ ವಹಿಸಬೇಕೆಂದು ಸಲಹೆ ನೀಡಿದರು.

ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹೆಣ್ಣುಮಕ್ಕಳನ್ನು ಉಳಿಸಿ ಗೌರವಿಸಿ ಎಂಬ ಸಂದೇಶ ಸಾರುವ ಅದ್ಬುತ ನೃತ್ಯವನ್ನು ಅನಿತಾ ಕಾನ್ವೆಂಟ್‌ನ ವಿದ್ಯಾರ್ಥಿಗಳು ಪ್ರಸ್ತುತ ಪಡಿಸುವುದರ ಜೊತೆಗೆ ಇತ್ತಿಚಿಗೆ ಹತ್ಯೆಗೀಡಾದ ದಿವ್ಯ ಹಾಗೂ ದೌರ್ಜನ್ಯಕ್ಕೆ ಒಳಗಾಗಿ ಅಸುನೀಗಿದ ಎಲ್ಲಾ ಹೆಣ್ಣು ಮಕ್ಕಳಿಗೆ ಭಾವಪೂರ್ಣ ಶ್ರದ್ದಾಂಜಲಿ ಅರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌ ಪಿ ನಾಗರಾಜು, ಪುರಸಭೆ ಮುಖ್ಯಾಧಿಕಾರಿ ಹರಿಪ್ರಸಾದ್, ಇನ್ಸ್ಪೆಕ್ಟೆರ್ ಎ ಕೆ ರಾಜೇಶ್, ಸಂತ ಮತೀಯಸರ ಚರ್ಚ್ ಫಾದರ್ ಪ್ರವೀಣ್, ಇ. ಹೃದಯರಾಜ್, ರಾಜ್ಯ ಅಲ್ಪಸಂಖ್ಯಾತರ ಸಂಘದ ಕಾರ್ಯದರ್ಶಿ ಆಶ್ರಾಫಿ, ಸ್ಟೆಂಟ್ ಆನ್ಸ್ ಪಿಯು ಕಾಲೇಜು ಪ್ರಾಂಶುಪಾಲರಾದ ರೆವರೆಂಡ್ ಸಿಸ್ಟರ್ ಆಶಾಕುಮಾರಿ, ಮುಖ್ಯ ಶಿಕ್ಷಕಿ ಸಿಸ್ಟರ್ ಮೇರಿ ವನಿತಾ, ನೃತ್ಯ ತರಬೇತುದಾರ ಸೋಮುಜಾಕ್ಸನ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!