Thursday, September 19, 2024

ಪ್ರಾಯೋಗಿಕ ಆವೃತ್ತಿ

ಬೆಂಗಳೂರು-ಮೈಸೂರು ಹೆದ್ದಾರಿ : ಮದ್ದೂರು ಪ್ರವೇಶಕ್ಕೆ ಚನ್ನಪಟ್ಟಣದಲ್ಲಿ ಅವಕಾಶ – ದಿನೇಶ್‌ ಗೂಳಿಗೌಡ ಅಸಮಾಧಾನ

ರಾಷ್ಟ್ರೀಯ ಹೆದ್ದಾರಿ-275, 6 ಪಥದ ಬೆಂಗಳೂರು-ಮೈಸೂರು ರಸ್ತೆಯ ಅಭಿವೃದ್ಧಿ ಕಾಮಗಾರಿಯಲ್ಲಿ ಮಂಡ್ಯ ಜಿಲ್ಲೆಯ ಗಡಿ ಭಾಗವಾದ ನಿಡಘಟ್ಟದ ಬಳಿ ಹೆದ್ದಾರಿಗೆ ಆಗಮನ-ನಿರ್ಗಮನ ಸಂಪರ್ಕ ವ್ಯವಸ್ಥೆಯಲ್ಲಿ ಸಮರ್ಪಕ ಕ್ರಮವಾಗಿಲ್ಲ. ಮದ್ದೂರು ಪಟ್ಟಣಕ್ಕೆ ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಪ್ರವೇಶಕ್ಕೆ ಅವಕಾಶ ಒದಗಿಸಲಾಗಿದೆ. ಇದು ಸರ್ಕಾರದ ಸರಿಯಾದ ಕ್ರಮವಲ್ಲ. ಕೂಡಲೇ ಇದರ ಬಗ್ಗೆ ಬಹಿರಂಗ ಚರ್ಚೆ ಆಗಬೇಕು ಎಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕರಾದ ದಿನೇಶ್‌ ಗೂಳಿಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-275, 6 ಪಥದ ಬೆಂಗಳೂರು-ಮೈಸೂರು ರಸ್ತೆಯ ಅಭಿವೃದ್ಧಿ ಹಾಗೂ ಮಂಡ್ಯ ಜಿಲ್ಲೆಯ ಗಡಿ ಭಾಗವಾದ ನಿಡಘಟ್ಟದ ಬಳಿ ಹೆದ್ದಾರಿಗೆ ಆಗಮನ-ನಿರ್ಗಮನ ಸಂಪರ್ಕ ವ್ಯವಸ್ಥೆ ಬಗ್ಗೆ ಶಾಸಕರು ಕೇಳಿದ್ದ ಪ್ರಶ್ನೆಗೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಅವರು ಸದನದಲ್ಲಿ ಉತ್ತರ ನೀಡಿದ್ದಾರೆ. ಆದರೆ, ಈಗ ಸರ್ಕಾರ ಕೈಗೊಂಡಿರುವ ನಿರ್ಧಾರ ಜನಸ್ನೇಹಿಯಾಗಿಲ್ಲ. ಜನವಿರೋಧಿ ಕ್ರಮವಾಗಿದೆ. ಈ ಸಂಬಂಧ ಉದ್ಘಾಟನೆಗೆ ಮೊದಲು ಚರ್ಚೆ ಆಗಬೇಕು ಎಂದು ಶಾಸಕರಾದ ದಿನೇಶ್‌ ಗೂಳಿಗೌಡ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!