Saturday, November 21, 2026

ಪ್ರಾಯೋಗಿಕ ಆವೃತ್ತಿ

ಡಿ.25ರಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬುನಾದಿ ತರಬೇತಿ

ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್ ವತಿಯಿಂದ ಮಂಡ್ಯನಗರದ ಕೃಷಿಕ್ ಸ್ಪರ್ಧಾಸೌಧದಲ್ಲಿ ಇದೇ ಡಿ.25ರಂದು ಬೆಳಿಗ್ಗೆ 10 ಗಂಟೆಗೆ ಐ.ಎ.ಎಸ್., ಕೆ.ಎ.ಎಸ್, ಬ್ಯಾಂಕಿಂಗ್ ಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ಮಾಹಿತಿ ಮಾಗದರ್ಶನ ನೀಡುವ ಬುನಾದಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನ ಕಾರ್ಯಾಧ್ಯಕ್ಷ ಡಾ.ರಾಮಲಿಂಗಯ್ಯ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಕೃಷಿಕ್ ಸರ್ವೋದಯ ಟ್ರಸ್ಟ್ ಒಂದು ಸೇವಾ ಸಂಸ್ಥೆಯಾಗಿ ಕಳೆದ 25 ವರ್ಷಗಳಿಂದ ಜಿಲ್ಲೆಯ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ  ಅಖಿಲ ಭಾರತ ನಾಗರೀಕ ಸೇವೆಗಳಾದ ಐ.ಎ.ಎಸ್, ಐ.ಪಿ.ಎಸ್, ಐ.ಎಫ್.ಎಸ್. ಮತ್ತು ಕರ್ನಾಟಕ ನಾಗರೀಕ ಸೇವೆಗಳಾದ ಕೆ.ಎ.ಎಸ್., ಕೆ.ಎಸ್.ಪಿ.ಎಸ್., ಬ್ಯಾಂಕಿಂಗ್ ಕ್ಷೇತ್ರದ ಪರೀಕ್ಷೆಗಳು ಹಾಗೂ ಇನ್ನಿತರ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ, ಮಾರ್ಗದರ್ಶನ ನೀಡುತ್ತಾ ಬರುತ್ತಿದೆ ಎಂದರು.

ತರಬೇತಿ ಅವಧಿಯಲ್ಲಿ ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ಅತಿ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ತರಬೇತಿಯನ್ನು ನಿರಂತರವಾಗಿ ನೀಡಲಾಗುತ್ತಿದೆ. ಇದುವರೆವಿಗೂ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಸ್ಪರ್ಧಾರ್ಥಿಗಳಿಗೆ ತರಬೇತಿ ನೀಡಿ, 800ಕ್ಕೂ ಹೆಚ್ಚು ಅಭ್ಯರ್ಥಿಗಳು ವಿವಿಧ ಸರಕಾರಿ ಹುದ್ದೆಗಳಿಗೆ ಆಯ್ಕೆಯಾಗಿ ರಾಜ್ಯದ ನಾನಾ ಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ವಿವರಿಸಿದರು.

ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ಮತ್ತು ಸ್ನಾತಕೋತ್ತರ ಪದವೀಧರರು ಹಾಗೂ ಈಗಾಗಲೇ ಪದವಿ ಮುಗಿಸಿರುವ ಅಭ್ಯರ್ಥಿಗಳು ಐ.ಎ.ಎಸ್, ಕೆ.ಎ.ಎಸ್, ಬ್ಯಾಂಕಿಂಗ್ ಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅವರಿಗೆ ಮಾಹಿತಿ, ಮಾರ್ಗದರ್ಶನ ನೀಡಲು ಒಟ್ಟು 10 ಭಾನುವಾರಗಳು ಮತ್ತು ಸರ್ಕಾರಿ ರಜಾ ದಿನಗಳಂದು ಉಚಿತವಾಗಿ ಬುನಾದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದರು.

ಡಿ.25 ನಿವೃತ್ತ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ ಅಧ್ಯಕ್ಷತೆಯಲ್ಲಿ ತರಬೇತಿ ನಡೆಯಲಿದ್ದು, ಟ್ರಸ್ಟ್‌ನ ಪದಾಧಿಕಾರಿಗಳು ಮತ್ತು ಧರ್ಮದರ್ಶಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಬುನಾದಿ ತರಬೇತಿ ಕಾರ್ಯಕ್ರಮದಲ್ಲಿ ರಾಜ್ಯದ ಪ್ರಖ್ಯಾತ ವಿಷಯ ತಜ್ಞ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ಅಭ್ಯರ್ಥಿಗಳಿಗೆ ಮಾಹಿತಿ, ಮಾರ್ಗದರ್ಶನ ನೀಡಲಿದ್ದಾರೆ. ಆದ್ದರಿಂದ ಹೆಚ್ಚಿನ ಸ್ಪರ್ಧಾರ್ಥಿಗಳು ಭಾಗವಹಿಸುವಂತೆ ಮನವಿ ಮಾಡಿದರು. ಹೆಚ್ಚಿನ ಮಾಹಿತಿಗಾಗಿ ಮೊ.9902211722, 94480-19306 ಅನ್ನು ಸಂಪರ್ಕಿಸಬಹುದೆಂದು ತಿಳಿಸಿದರು.

ಗೋಷ್ಠಿಯಲ್ಲಿ ಟ್ರಸ್ಟ್ ನ ಕಾರ್ಯದರ್ಶಿ ಎ.ಎಂ.ಅಣ್ಣಯ್ಯ, ಸಂಯೋಜಕ ಡಾ.ಕೆ.ಬಿ.ಬೋರಯ್ಯ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ