Sunday, November 22, 2026

ಪ್ರಾಯೋಗಿಕ ಆವೃತ್ತಿ

ಪ್ರವರ್ಗ–1ರ ಜಾತಿ ಒಕ್ಕೂಟದ ಜಿಲ್ಲಾ ಘಟಕ ಅಸ್ತಿತ್ವಕ್ಕೆ

ಮಂಡ್ಯ ನಗರದ ರೈತ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪ್ರವರ್ಗ–1ರ ಜಾತಿಗಳ ಒಕ್ಕೂಟದ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳು ಶನಿವಾರ ಉದ್ಘಾಟನೆಗೊಂಡು ಅಸ್ವಿತ್ವಕ್ಕೆ ಬಂದವು.

ಮಾಜಿ ಸಚಿವ ಎಂ.ಎಸ್‌.ಆತ್ಮಾನಂದ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮೀಸಲಾತಿ ವಿಚಾರದಲ್ಲಿ ಎಲ್ಲ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ. ಎಲ್ಲ ಸಮುದಾಯಗಳು ಸೇರಿದರಷ್ಟೇ ಒಂದು ಸಮಾಜವಾಗುತ್ತದೆ. ಯಾರಿಗೂ ಇದರಲ್ಲಿ ಅನ್ಯಾಯವಾಗಬಾರದು. ಸಮುದಾಯಗಳಿಗೆ ಹೆಚ್ಚು ಅವಕಾಶ ಸಿಗುವಂತೆ ನೋಡಿಕೊಳ್ಳುವುದು ಸರ್ಕಾರದ ಮುಖ್ಯ ಕರ್ತವ್ಯವಾಗಿದೆ ಎಂದರು.

ಬಾಬಾ ಸಾಹೇಬ್‌ ಅಂಬೇಡ್ಕರ್ ಅವರು ಸೇರಿದಂತೆ ಹಲವು ಮಹನೀಯರ ಬಗ್ಗೆ ನಾವು ತಿಳಿದುಕೊಳ್ಳಬೇಕು. ಶಿಕ್ಷಣ ಪ್ರಸ್ತುತ ಸಂದರ್ಭದಲ್ಲಿ ಬಹಳ ಮುಖ್ಯವಾಗಿದೆ. ವಿದ್ಯೆಯನ್ನು ಪಡೆಯುವ ಮೂಲಕ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಒಕ್ಕೂಟದ ರಾಜ್ಯಾಧ್ಯಕ್ಷ ಡಿ.ಟಿ.ಶ್ರೀನಿವಾಸ್‌ ಮಾತನಾಡಿ, ನಮ್ಮ ಸಮುದಾಯದ ಪರಿಸ್ಥಿತಿ ಏನಿದೆ ಎಂಬುದನ್ನು ತಿಳಿದುಕೊಂಡಿದ್ದೀರಾ ? ನಮಗೆ ಸಿಗಬೇಕಾದ ಸೌಲಭ್ಯ ಸಿಕ್ಕಿದೆಯೇ ?  ನಮ್ಮನ್ನಾಳುವ ಸರ್ಕಾರಗಳು ಸಮಸ್ಯೆ ಬಗೆಹರಿಸುತ್ತಿಲ್ಲ, ನಮ್ಮ ವಿದ್ಯಾರ್ಥಿಗಳಿಗೆ ಮೋಸವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ಮುಖಂಡರಾದ ಎಂ.ಎ.ಶ್ರೀನಿವಾಸ್, ಹನೂರು ವೆಂಕಟೇಶ್‌, ಜಯರಾಮು, ಎ.ವಿ.ಲೋಕೇಶಪ್ಪ, ಪೂರ್ಣಿಮ, ಜೋಗಿ, ನಾಗರಾಜ್‌, ರಮೇಶ್‌, ನಾಗರತ್ನ, ಎಚ್‌.ಎಸ್‌.ಉಮೇಶ್‌, ಲಿಂಗಯ್ಯ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ