ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರವಾದ ಬೇಲೂರು ಗ್ರಾಮ ಪಂಚಾಯಿತಿ ಆವರಣದ ಮುಂಭಾಗ ನಡೆದ ಸಮಾರಂಭದಲ್ಲಿ ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಸಚಿವರಾದ ಕೆ.ಗೋಪಾಲಯ್ಯ ಹಾಗೂ ಕೆ.ಸಿ.ನಾರಾಯಣ ಗೌಡರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
ಬೇಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಸಿ.ಮಾಯಿಗಯ್ಯ ಹಾಗೂ ಹಾಲಿ ಸದಸ್ಯರಾದ ಪಟೇಲ್ ಬಿ.ಕೆ ಸತೀಶ್ ಚಂದ್ರರವರ ಜೊತೆಗೂಡಿ ನೂರಾರು ಕಾರ್ಯಕರ್ತರು ಮತ್ತು ಬಿ.ಯರಹಳ್ಳಿ ಗ್ರಾಮದ ಹಲವಾರು ಮುಖಂಡರು ಇಂದು ಬಿಜೆಪಿ ನಾಯಕ ಇಂಡುವಾಳು ಎಸ್.ಸಚ್ಚಿದಾನಂದ ನೇತೃತ್ವದಲ್ಲಿ ಅಬಕಾರಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹಾಗೂ ಕ್ರೀಡಾ ಸಬಲೀಕರಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ ನಾರಾಯಣಗೌಡರವರ ಸಮ್ಮುಖದಲ್ಲಿ ಬಿಜೆಪಿ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಸಚಿವ ಕೆ.ಗೋಪಾಲಯ್ಯನವರು ಬಿಜೆಪಿ ಪಕ್ಷಕ್ಕೆ ಉತ್ತಮ ಭವಿಷ್ಯವಿದ್ದು, ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಮುಖಂಡರಾದ ಸಿದ್ದರಾಮಯ್ಯ, ಎಲೆಚಾಕನಹಳ್ಳಿ ಬಸವರಾಜ್, ರಾಜೀವ್ ಸೇರಿದಂತೆ ಹಲವರಿದ್ದರು.




